News Karnataka Kannada
Saturday, May 04 2024
ಸಾಂಡಲ್ ವುಡ್

ಬೆಂಗಳೂರು: ಇಂದು ಗೀತಾ ಶಿವರಾಜ್ ಕುಮಾರ್‌ ಕಾಂಗ್ರೆಸ್‌ಗೆ ಸೇರ್ಪಡೆ

Geetha Shivakumar to join Congress today
Photo Credit : Facebook

ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಇಂದು(ಏಪ್ರಿಲ್ 28) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಜಾಲತಾಣಗಳಲ್ಲಿ ಈ ಬಗ್ಗೆ ಪರವಿರೋಧ ಚರ್ಚೆ ನಡೆದಿದ್ದು, ಕೆಲವರು ಗೀತಾ ಶಿವರಾಜ್​ ಕುಮಾರ್​ ಅವರ ಈ ನಡೆಯನ್ನು ಖಂಡಿಸುತ್ತಿದ್ದರೆ, ಇನ್ನೂ ಕೆಲವರು ಸ್ವಾಗತಿಸಿದ್ದಾರೆ. ಇನ್ನು ಪತ್ನಿ ಗೀತಾ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇದೀಗ ಸ್ವತಃ ಶಿವರಾಜ್ ಕುಮಾರ್ ಬೆಂಬಲಿಸಿದ್ದಾರೆ. ಅಲ್ಲದೇ ಪತ್ನಿ ಜೊತೆ ತಾವು ಪ್ರಚಾರಕ್ಕೆ ಹೋಗುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ದೊಡ್ಮನೆ ಬಲ ಕಾಂಗ್ರೆಸ್​ಗೆ ಸಿಕ್ಕಂತಾಗಿದೆ.

ಗೀತಾ ಕಾಂಗ್ರೆಸ್​ ಪಕ್ಷಕ್ಕೆ ಸೇರುತ್ತಿರುವುದಕ್ಕೆ ಖುಷಿ ಆಗುತ್ತಿದೆ. ಹೊಸ ಬದಲಾವಣೆ ಬಯಸಿ ಗೀತಾ ಈ ನಿರ್ಧಾರ ಕೈಗೊಂಡಿದ್ದಾರೆ. ನಾಳೆಯಿಂದಲೇ ಗೀತಾ, ನಾನು ಪ್ರಚಾರದಲ್ಲಿ ಭಾಗಿಯಾಗುತ್ತೇವೆ. ನಾಳೆ ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಪರ ಗೀತಾ, ನಾನು ಪ್ರಚಾರ ಮಾಡುತ್ತೇವೆ. ಹಾಗೇ ಶಿರಸಿಯಲ್ಲೂ ಭೀಮಣ್ಣ ನಾಯ್ಕ(ಕಾಂಗ್ರೆಸ್ ಅಭ್ಯರ್ಥ) ಪರ ಗೀತಾ ಪ್ರಚಾರ ನಡೆಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು