ಬೆಂಗಳೂರು: ಪ್ರತಿಷ್ಠಿತ ಹೊಂಬಾಳೆ ಚಿತ್ರ ನಿರ್ಮಾಣ ಕಂಪನಿಯು ಯುವ ಚಿತ್ರ ಮೂಲಕ ಮತ್ತೊಮ್ಮೆ ಸಿನಿಮಾ ರಂಗದಲ್ಲಿ ಸದ್ದು ಮಾಡಲು ಸಜ್ಜಾಗಿದೆ.
ರಾಜ್ ಕುಮಾರ್ ಕುಟುಂಬದ ಕುಡಿ ರಾಜ್ಕುಮಾರ್ ಅವರ ಮೊಮ್ಮಗ ಯುವ ರಾಜ್ ಕುಮಾರ್ ಯುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.
ರಾಘವೇಂದ್ರ ರಾಜ್ಕುಮಾರ್ ಅವರ ಪುತ್ರ ಯುವ ರಾಜ್ ಕುಮಾರ್ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದು, ಆಕ್ಷನ್, ಫ್ಯಾಮಿಲಿ ಕಥಾಹಂದರ ಹೊಂದಿರುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ.
ಅಜನೀಶ್ ಲೋಕನಾಥ್ ಮತ್ತು ಸಂತೋಷ್ ಆನಂದರಾಮ್ ಅವರು ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಕಾಂತಾರದ ಬೆಡಗಿ ಸಪ್ತಮಿ ಗೌಡ ನಾಯಕಿಯಾಗಿ ಚಿತ್ರದಲ್ಲಿ ನಟಿಸಿದ್ದಾರೆ.