ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮೇಲಿಂದ ಮೇಲೆ ಅನ್ಯಾಯವಾಗುತ್ತಿದೆ. ಆದರೂ ಕೂಡ ತಮಿಳುನಾಡಿಗೆ ನೀರು ಹರಿಯಬಿಟ್ಟಿರುವುದು ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ.
ಇದೇ ಕಾರಣದಿಂದ ಮೊನ್ನೆ ಮೊನ್ನೆಯಷ್ಟೆ ರಾಜ್ಯವಾಪಿ ಬಂದ್ ನಡೆದಿತ್ತು. ಅದರಲ್ಲಿಯೂ ಕೂಡ ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಅಲ್ಲದೆ ಹಲವು ಚಿತ್ರರಂಗದ ನಟ ನಟಿಯರು ಪ್ರತಿಭಟನೆ ನಡೆಸಿದ್ದರು. ಇದೀಗ ಕಾವೇರಿ ಹೋರಾಟಕ್ಕೆ ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರೇಮ್ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಕಾವೇರಿ ನಮ್ಮದು ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕಾವೇರಿ ವಿಚಾರವಾಗಿ ರಾಜ್ಯಕ್ಕೆ ನ್ಯಾಯ ನೀಡುವಂತೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.