ಮಂಗಳೂರು: ಕರಾವಳಿ ಮೂಲದ ಶಿಲ್ಪಾ ಶೆಟ್ಟಿ ಮುಂಬೈನಲ್ಲಿ ನೆಲೆಯಾಗಿದ್ದರೂ ತವರಿನ ನಂಟು ಬಿಟ್ಟವರಲ್ಲ. ಶಿಲ್ಪಾ ಇತ್ತೀಚೆಗಷ್ಟೇ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇದೇ ವೇಳೆ ಮಾತನಾಡಿದ ಶಿಲ್ಪಾ, ತಮ್ಮ ಮಕ್ಕಳಿಗೂ ತನ್ನ ತವರು ಮಂಗಳೂರಿನ ಸಂಸ್ಕೃತಿ, ಆಚರಣೆಗಳನ್ನು ಪರಿಚಯಿಸುವ ಆಸೆ ಇದೆ ಎಂದಿದ್ದಾರೆ.
ಶಿಲ್ಪಾ ಶೆಟ್ಟಿಯವರಿಗೆ ವಿಹಾನ್ ಹಾಗೂ ಸಮಿಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಸದ್ಯ ಶಿಲ್ಪಾ ಶೆಟ್ಟಿ ಪ್ರೇಮ್ ನಿರ್ದೇಶನದ “ಕೆಡಿ’ ಚಿತ್ರದಲ್ಲಿ ನಟಿಸಿದ್ದು, ಯುಗಾದಿ ಹಬ್ಬದ ಸಂದರ್ಭದಲ್ಲಿ ಶಿಲ್ಪಾ ಶೆಟ್ಟಿ ಪಾತ್ರವನ್ನು ಅನಾವರಣಗೊಳಿಸಿದೆ. ಚಿತ್ರದಲ್ಲಿ ಶಿಲ್ಪಾ ಶೆಟ್ಟಿ ಸತ್ಯವತಿ ಎಂಬ ಪಾತ್ರ ಮಾಡುತ್ತಿದ್ದಾರೆ. ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿರುವ ಅವರ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.