ಬೆಂಗಳೂರು: ಡಿಂಪಲ್ ಕ್ವೀನ್ ರಚಿತಾ ರಾಮ್ ಕೆಲಕಾರಣಕ್ಕೆ ತಾವು ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಹೇಳಿಕೊಂಡಿದ್ದಾರೆ .ಅಲ್ಲದೆ ಈ ಬಗ್ಗೆ ಸೋಶಿಯಲ್ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕರ್ನಾಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಈ ವರ್ಷ ನನ್ನ ಜನ್ಮ ದಿನವನ್ನು ಆಚರಿಸುವುದು ಸೂಕ್ತವಲ್ಲ ಎನಿಸುತ್ತಿದೆ. ನಾನು ಮನೆಯಲ್ಲಿ ಇರುವುದಿಲ್ಲವಾದ್ದರಿಂದ ನನ್ನ ಅಭಿಮಾನಿಗಳು ನನ್ನ ಮನೆಯ ಹತ್ತಿರ ಬರಬೇಡಿ ಎಂದು ದಯೆಯಿಂದ ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಅಭಿಮಾನ ನನ್ನೊಂದಿಗೆ ಸದಾ ಇರಲಿ. ನಿಮ್ಮ ರಚ್ಚು’ ರಚಿತಾ ಬರೆದುಕೊಂಡಿದ್ದಾರೆ.
ನಟಿ ರಚಿತಾ ರಾಮ್ ಅವರು ಪ್ರತಿವರ್ಷ ಅಕ್ಟೋಬರ್ 3ರಂದು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಆದರೆ, ಈ ಭಾರಿ ತಮ್ಮ ಹುಟ್ಟುಹಬ್ಬದ ಆಚರಣೆಗೆ ಬ್ರೇಕ್ ಹಾಕಿದ್ದಾರೆ.
https://www.instagram.com/rachita_instaofficial/?utm_source=ig_embed&ig_rid=3ae6aad2-d924-41fb-a76f-8515f77c4972