News Karnataka Kannada
Thursday, May 02 2024
ಸಾಂಡಲ್ ವುಡ್

ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ: ರಗಡ್ ಅವತಾರದಲ್ಲಿ ಲವ್ಲಿ ಸ್ಟಾರ್ ಪ್ರೇಮ್

ರಗಡ್ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಮತ್ತೆ ಬರುತ್ತಿದ್ದಾರೆ ಲವ್ಲಿ ಸ್ಟಾರ್ ಪ್ರೇಮ್. ಹೌದು ನಿನ್ನೆ ಪ್ರೇಮ್ ಜನ್ಮದಿನ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ.
Photo Credit : NewsKarnataka

ಬೆಂಗಳೂರು: ರಗಡ್ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಮತ್ತೆ ಬರುತ್ತಿದ್ದಾರೆ ಲವ್ಲಿ ಸ್ಟಾರ್ ಪ್ರೇಮ್. ಹೌದು ನಿನ್ನೆ ಪ್ರೇಮ್ ಜನ್ಮದಿನ. ಅವರ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ.

ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದ್ದು, ಇಡೀ ಚಿತ್ರತಂಡ ಭಾಗಿಯಾಗಿ ತಾಯಿಯ ಆಶೀರ್ವಾದ ಪಡೆದುಕೊಂಡರು.

ಯುವ ಪ್ರತಿಭೆ ತೇಜಸ್ ಬಿ.ಕೆ  ಕಥೆ ಚಿತ್ರಕಥೆ ಬರೆದು ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಚಿತ್ರಕ್ಕಿದೆ. ಹೆಸರಿಡದ ಈ ಸಿನಿಮಾಗೆ ಮಧು ಗೌಡ ಬಂಡವಾಳ ಹೂಡಿದ್ದಾರೆ. ಮುಹೂರ್ತ ನೆರವೇರಿಸಿರುವ ಚಿತ್ರತಂಡ ಈ ತಿಂಗಳ್ಯಾಂತಕ್ಕೆ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

ಬಳಿಕ ನೆನಪಿರಲಿ ಪ್ರೇಮ್ ಮಾತನಾಡಿ, ಇಂದು ನಾನು ಹುಟ್ಟಿದ ದಿನ . ಈ ದಿನ ಮುಹೂರ್ತ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. 2.0 ರೀಬ್ರ್ಯಾಂಡಿಂಗ್ ಅಂತಾ ನನ್ನ ಸ್ನೇಹಿತರು ಕೇಳಿದರು. ಈ ಮೊದಲು ಆಕ್ಷನ್ ಸಿನಿಮಾ ಮಾಡಿದ್ದೇವು. ಆದರೆ ಬಹಳಷ್ಟು ಗ್ಯಾಪ್ ಆಗಿತ್ತು. ಲವ್ ಬ್ರ್ಯಾಂಡ್ ಆಗಿದ್ದರಿಂದ ಈಗ ಒಂದೊಳ್ಳೆ ಕಥೆಯೊಂದಿಗೆ ನಿರ್ದೇಶಕರು ಬಂದರು. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ.

ಸಿನಿಮಾದಲ್ಲಿ ಸ್ಟ್ರೀಕ್ಟ್ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ಸ್ಕ್ರೀಪ್ಟ್ ರೆಡಿಯಾಗ್ತಿದೆ. ಕ್ಲೈಮ್ಯಾಕ್ಸ್ ಚರ್ಚೆ ಹಂತದಲ್ಲಿದೆ. ಪೂರ್ಣ ಪ್ರಮಾಣದಲ್ಲಿ ಸ್ಟಾರ್ ಕಾಸ್ಟ್ ಡಿಸೈಡ್ ಆಗಿಲ್ಲ. ಮುಂದಿನ ದಿನಗಳಲ್ಲಿ ಮುಹೂರ್ತ ಮಾಡಬೇಕು ಎಂದುಕೊಂಡಿದ್ದೇವು. ಆದರೆ ನಿಮ್ಮ ಬರ್ತ್ ಡೇ ಒಳ್ಳೆ ಸಂದರ್ಭ ಸರ್ ಅಂತಾ ನಿರ್ದೇಶಕರು ಹೇಳಿದ್ದರು. ಹೀಗಾಗಿ ಈ ದಿನ ಮುಹೂರ್ತ ಮಾಡಿದ್ದೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು