News Karnataka Kannada
Thursday, April 25 2024
ಸಾಂಡಲ್ ವುಡ್

ವಂಶಿಕಾ ಹೆಸರು ಹೇಳಿ ವಂಚನೆ ಕೇಸ್‌: ನಿಶಾ ನರಸಪ್ಪಗೆ ನ್ಯಾಯಾಂಗ ಬಂಧನ

Nisha Narasappa sent to judicial custody in cheating case by naming Vamshika
Photo Credit : News Kannada

ಬೆಂಗಳೂರು: ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರು ದುರ್ಬಳಕೆ ಮಾಡಿಕೊಂಡು ಕೆಲ ಮಕ್ಕಳ ಪಾಲಕರಿಂದ ಹಣ ಪಡೆದು ವಂಚಿಸಿದ ಆರೋಪದಡಿ ಬಂಧನೊಕ್ಕೊಳಗಾಗಿದ್ದ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮುಖ್ಯಸ್ಥೆ ನಿಶಾ ನರಸಪ್ಪ(24) ಅವರನ್ನು 39ನೇ ಎಸಿಎಂಎಂ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

ವಿದ್ಯಾರಣ್ಯಪುರದ ನಿವಾಸಿ ಹಾಗೂ ಎನ್.ಎನ್.ಪ್ರೋಡಕ್ಷನ್ ಸಂಸ್ಥೆಯ ಮುಖ್ಯಸ್ಥೆ ನಿಶಾ, ವಂಶಿಕಾ ಹೆಸರು ದುರ್ಬಳಕೆ ಮಾಡಿಕೊಂಡು ರಿಯಾಲಿಟಿ ಶೋಗಳಲ್ಲಿ ಅವಕಾಶ ಕೊಡಿಸುವುದಾಗಿ ನಂಬಿಸಿ ಕೆಲ ಮಕ್ಕಳ ಪಾಲಕರಿಂದ ಹಣ ಪಡೆದು ವಂಚಿಸಿದ್ದಾಳೆ ಎಂದು ಆರೋಪಿಸಿ ವಂಶಿಕಾ ತಾಯಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಎಫ್‌ಐಆರ್ ದಾಖಲಿಸಿದ್ದ ಪೊಲೀಸರು ಆರೋಪಿ ನಿಶಾಳನ್ನು ಬಂಧಿಸಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರಪಡಿಸಿದ್ದರು. ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.

ಆರೋಪಿ ನಿಶಾ ಸದಾಶಿವನಗರದ ಕೆಫೆಯಲ್ಲಿ ಗುರುವಾರ ಮಕ್ಕಳ ಪಾಲಕರ ಜತೆ ಮಾತುಕತೆ ನಡೆಸುವ ವೇಳೆ ಹಣ ಕಳೆದುಕೊಂಡಿದ್ದ ಕೆಲವರು ತೆರಳಿ ಗಲಾಟೆ ಮಾಡಿದ್ದರು. ಈ ಬಗ್ಗೆ ಮಾಹಿತಿ ಪಡೆದ ಸದಾಶಿವನಗರ ಪೊಲೀಸರು, ಕೂಡಲೇ ಸ್ಥಳಕ್ಕೆ ತೆರಳಿ ನಿಶಾಳನ್ನು ವಶಕ್ಕೆ ಪಡೆದಿದ್ದರು. ಬಳಿಕ ಯಶಸ್ವಿನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು