News Karnataka Kannada
Saturday, April 20 2024
Cricket
ಸಾಂಡಲ್ ವುಡ್

ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ ಪಿ.ಆರ್.ಕೆ ಪ್ರೊಡಕ್ಷನ್ಸ್ ನ ‘O2’ 

ಚಿತ್ರರಂಗದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿರುವ‌ ಪಿ.ಆರ್.ಕೆ ಪ್ರೊಡಕ್ಷನ್ಸ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದರಲ್ಲಿ‌ ನಿಸ್ಸೀಮರು.  ಪಿ.ಆರ್.ಕೆ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್  ಅವರ ನಿರ್ಮಾಣದ ಹತ್ತನೇ ಚಿತ್ರ ‘O2’  ಸಿನಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ.
Photo Credit : NewsKarnataka

ಬೆಂಗಳೂರು: ಚಿತ್ರರಂಗದಲ್ಲಿ ತನ್ನದೇ ಆದಂತಹ ಛಾಪನ್ನು ಮೂಡಿಸಿರುವ‌ ಪಿ.ಆರ್.ಕೆ ಪ್ರೊಡಕ್ಷನ್ಸ್ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವುದರಲ್ಲಿ‌ ನಿಸ್ಸೀಮರು.  ಪಿ.ಆರ್.ಕೆ ಬ್ಯಾನರ್ ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್  ಅವರ ನಿರ್ಮಾಣದ ಹತ್ತನೇ ಚಿತ್ರ ‘O2’  ಸಿನಿ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ.

ವಿಭಿನ್ನವಾದ ಕಥಾಹಂದರವನ್ನು ಹೊಂದಿರುವಂತಹ ಚಿತ್ರ. ಸಾಯುತ್ತಿರುವವರನ್ನು ಬದುಕಿಸುವುದೇ ವೈದ್ಯರ ಆದ್ಯ ಕರ್ತವ್ಯ ಎಂದು ನಂಬುವ ಶ್ರದ್ಧಾ (ಆಶಿಕಾ ರಂಗನಾಥ್), ತನ್ನ ಸಂಶೋಧನೆಯ ಫಲವಾದ O2 ಎಂಬ ಡ್ರಗ್ ಮೂಲಕ ಸಾವು-ಬದುಕಿನ ಮಧ್ಯೆ ಹೋರಾಡುತ್ತಿರುವವರನ್ನು ಬದುಕಿಸುವ ಪ್ರಯತ್ನಕ್ಕೆ ಮುಂದಾಗುತ್ತಾಳೆ.

ಈ ಎಲ್ಲಾ ಅಡೆತಡೆಗಳನ್ನು ಮೀರಿ ಗುರಿ ತಲುಪಲು ಶ್ರದ್ಧಾಳಿಗೆ ಸಾಧ್ಯವಾಗುವುದೋ ಇಲ್ಲವೋ ಎಂಬುದನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲಿ ನೋಡಿ ತಿಳಿದುಕೊಳ್ಳಬೇಕಿದೆ.

ಚಿತ್ರದಲ್ಲಿ ಆಶಿಕಾ ರಂಗನಾಥ್, ಪ್ರವೀಣ್ ತೇಜ್, ರಾಘವ್ ನಾಯಕ್, ಸಿರಿ ರವಿಕುಮಾರ್, ಪ್ರಕಾಶ್ ಬೆಳವಾಡಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಹಾಗೂ ಚಿತ್ರವನ್ನು ಪ್ರಶಾಂತ್ ರಾಜ್ ಮತ್ತು ಚಿತ್ರದ‌ ನಾಯಕ ರಾಘವ್ ನಾಯಕ್ ನಿರ್ದೇಶಿಸಿರುತ್ತಾರೆ‌.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು