News Karnataka Kannada
Monday, May 06 2024
ಗಾಂಧಿನಗರ

ರಶ್ಮಿಕಾ ಮಂದಣ್ಣನ ಸಕ್ಸಸ್ ಬಗ್ಗೆ ನನಗೆ ಖುಷಿಯಿದೆ ಎಂದ ರಕ್ಷಿತ್ ಶೆಟ್ಟಿ

Rakshit Shetty: I am happy with Rashmika Mandanna's success
Photo Credit : News Kannada

ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅವರ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಸಕ್ಸಸ್ ಕಂಡಿದೆ. ಕನ್ನಡದಲ್ಲಿ ಯಶಸ್ಸು ಕಂಡ ಬೆನ್ನಲ್ಲೇ ತೆಲುಗು ವರ್ಷನ್‌ನಲ್ಲೂ ಮನು-ಪ್ರಿಯಾ ಕಥೆ ರಿಲೀಸ್ ಆಗಿದೆ. ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ರಕ್ಷಿತ್ ಬ್ಯುಸಿಯಾಗಿದ್ದಾರೆ.

ಇನ್ನು ತೆಲುಗು ರಾಜ್ಯಗಳಲ್ಲಿ ರಶ್ಮಿಕಾ ಮಂದಣ್ಣ ಜನಪ್ರಿಯ ತಾರೆ, ಇದೇ ಕಾರಣಕ್ಕೆ ರಕ್ಷಿತ್ ಶೆಟ್ಟಿಗೆ ಸಹಜವಾಗಿಯೇ ರಶ್ಮಿಕಾ ಮಂದಣ್ಣ ಕುರಿತಾದ ಪ್ರಶ್ನೆಗಳು ಸಂದರ್ಶನಗಳಲ್ಲಿ ಎದುರಾಗಿವೆ. ಯೂಟ್ಯೂಬರ್ ಒಬ್ಬರೊಟ್ಟಿಗಿನ ಸಂದರ್ಶನದಲ್ಲಿ ರಶ್ಮಿಕಾ ಬಗ್ಗೆ ಕೇಳಲಾದ ಪ್ರಶ್ನೆಗೆ, ಎಂದಿನಂತೆ ಶಾಂತವಾಗಿ ಉತ್ತರಿಸಿದ್ದಾರೆ.

ರಕ್ಷಿತ್ ಶೆಟ್ಟಿ ಈಗಲೂ ರಶ್ಮಿಕಾ ಅವರೊಟ್ಟಿಗೆ ಸಂಪರ್ಕದಲ್ಲಿದ್ದಾರಾ? ಎಂಬ ಪ್ರಶ್ನೆಯನ್ನು ಯೂಟ್ಯೂಬರ್ ಒಬ್ಬರು ಕೇಳಿದ್ದಾರೆ. ಪ್ರಶ್ನೆಗೆ ಉತ್ತರಿಸಿದ ನಟ ರಕ್ಷಿತ್ ಶೆಟ್ಟಿ, ಹೌದು, ನಾವು ಸಂಪರ್ಕದಲ್ಲಿದ್ದೇವೆ. ಆಕೆಗೆ ಸದಾ ದೊಡ್ಡ ಕನಸುಗಳಿದ್ದವು, ಆ ಕನಸುಗಳನ್ನು ಈಗ ಸಾಕಾರಗೊಳಿಸಿಕೊಳ್ಳುತ್ತಿದ್ದಾರೆ. ಅವರ ಸಾಧನೆಗೆ ಭೇಷ್ ಎನ್ನಲೇಬೇಕು, ಆಕೆಯ ಸಕ್ಸಸ್‌ ಬಗ್ಗೆ ಖುಷಿಯಿದೆ ಎಂದಿದ್ದಾರೆ. ಈ ಹಿಂದೆಯೂ ರಶ್ಮಿಕಾ ಬಗ್ಗೆ ಪ್ರಶ್ನೆ ಎದುರಾದಾಗೆಲ್ಲ ರಕ್ಷಿತ್ ಶೆಟ್ಟಿ ಇದೇ ಘನತೆಯಿಂದಲೇ ಉತ್ತರ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು