ಮತ್ತೆ ವೀಕೆಂಡ್‌ ವಿತ್‌ ರಮೇಶ್‌ ಮೊದಲ ಅತಿಥಿ ರಮ್ಯಾ

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ವೀಕೆಂಡ್ ವಿತ್ ರಮೇಶ್’ ಮತ್ತೆ ಬರುತ್ತಿದೆ. ಈಗಾಗಲೇ 4 ಸೀಸನ್‌ಗಳನ್ನು ಯಶಸ್ವಿಯಾಗಿ ಮುಗಿಸಿರುವ ವೀಕೆಂಡ್ ವಿತ್ ರಮೇಶ್ ಇದೀಗ 5ನೇ ಸೀಸನ್ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ.

ಮತ್ತೆ ನಟ ರಮೇಶ್ ನಿರೂಪಣ ಶೈಲಿಯ ಜೊತೆಗೆ ಇದೀಗ ಮತ್ತೆ ಬರುತ್ತಿದ್ದು, ಈ ಬಾರಿ ಸಾಧಕರ ಸೀಟ್ ಏರುವ ಅತಿಥಿಗಳು ಯಾರು ಎನ್ನುವ ಲಿಸ್ಟ್ ಬಹಿರಂಗವಾಗಿದೆ. ಅಂದಹಾಗೆ ಸೀಸನ್ 5ನೇ ಮೊದಲ ಅತಿಥಿ ರಮ್ಯಾ ಎನ್ನುವುದು ಬಹಿರಂಗವಾಗಿದೆ.

ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ನಿರೂಪಕ ರಮೇಶ್ ಅರವಿಂದ್ ಹಾಗೂ ಜೀ ವಾಹಿನಿಯ ಚೀಫ್ ಕಂಟೆಂಟ್ ಆಫೀಸರ್ ರಾಘವೇಂದ್ರ ಹುಣಸೂರು ಅವರು ಪತ್ರಿಕಾಗೋಷ್ಠಿಯಲ್ಲಿ ಶೋ ಕುರಿತಾಗಿ ಮಾಹಿತಿ ನೀಡಿದ್ದು, ಮೊದಲ ಎಪಿಸೋಡ್​ನ ಅತಿಥಿ ಯಾರಾಗಲಿದ್ದಾರೆ ಎಂಬುದರ ಜೊತೆಗೆ ಈ ಸೀಸನ್​ನಲ್ಲಿ ಕಾಣಿಸಿಕೊಳ್ಳುವ ಇತರೆ ಕೆಲವು ಅತಿಥಿಗಳ ಹೆಸರನ್ನು ಬಹಿರಂಗಪಡಿಸಿದ್ದಾರೆ.

ಇಷ್ಟು ದಿನ ಹರಿದಾಡಿದ್ದ ಸುದ್ದಿಯ ಪ್ರಕಾರ ಮೊದಲ ಎಪಿಸೋಡ್​ನಲ್ಲಿ ರಿಷಬ್ ಶೆಟ್ಟಿ ಅತಿಥಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ ಅದು ಸುಳ್ಳಾಗಿದ್ದು ಮೊದಲ ಎಪಿಸೋಡ್​ಗೆ ಸ್ಯಾಂಡಲ್​ವುಡ್ ಕ್ವೀನ್ ನಟಿ ರಮ್ಯಾ ಅತಿಥಿಯಾಗಿ ಭಾಗಿಯಾಗಲಿದ್ದಾರೆ.

ರಮ್ಯಾ ಜೊತೆಗಿನ ಎಪಿಸೋಡ್​ನ ಚಿತ್ರೀಕರಣ ಮಾರ್ಚ್ 21 ರಿಂದ ಪ್ರಾರಂಭವಾಗಲಿದೆ. ಎರಡನೇ ಎಪಿಸೋಡ್ ನಲ್ಲಿ ಡ್ಯಾನ್ಸ್ ಲಿಜೆಂಡ್ ಪ್ರಭುದೇವ ಸಾಧಕರ ಕುರ್ಚಿಯ ಮೇಲೆ ಕೂರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಈ ಸೀಸನ್​ನಲ್ಲಿ ನಟ ಧ್ರುವ ಸರ್ಜಾ, ನಟಿ ರಚಿತಾ ರಾಮ್, ನಟಿ ಮಾಲಾಶ್ರೀ, ಇಶಾ ಫೌಂಡೇಶನ್​ನ ಜಗ್ಗಿ ವಾಸುದೇವ್ , ಖ್ಯಾತ ಹೃದ್ರೋಗ ತಜ್ಞ ಮಂಜುನಾಥ್ ಸೇರಿದಂತೆ ಇನ್ನೂ ಹಲವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶೇಷವೆಂದರೆ ಇನ್ನು 16 ಸಾಧಕರ ಬಳಿಕ ನೂರನೇ ಸಾಧಕರು ಬರಲಿದ್ದು, ಆ ಎಪಿಸೋಡ್​ಗೆ ಬಹಳ ವಿಶೇಷ ಅತಿಥಿಯೊಬ್ಬರು ಸಾಧಕರ ಕುರ್ಚಿ ಏರಲಿದ್ದಾರೆ. ನೂರನೇ ಎಪಿಸೋಡ್​ಗೆ ಬರುವ ಅತಿಥಿ ಆ ಚೇರ್​ಗೆ ನ್ಯಾಯ ಕೊಡಲಿದ್ದಾರೆ ಎಂದಿದ್ದಾರೆ ನಟ ರಮೇಶ್. ಕಿರುತೆರೆ ಪ್ರೇಕ್ಷಕರು ಬಹು ನಿರೀಕ್ಷೆಯಿಂದ ಕಾಯುತ್ತಿರುವ ವೀಕೆಂಡ್ ರಮೇಶ್ ಇದೇ ಮಾರ್ಚ್ 25 ರಿಂದ ಪ್ರಾರಂಭಿಸಲು ವಾಹಿನಿ ನಿರ್ಧರಿಸಿದೆ.

Sneha Gowda

Recent Posts

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

5 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

11 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

26 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

37 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

51 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

1 hour ago