‘ಕಾಂತಾರ 2 ಗಾಗಿ ಉದ್ದನೆಯ ಗಡ್ಡ ಬಿಟ್ಟ ರಿಷಬ್ ಶೆಟ್ಟಿ

ಬೆಂಗಳೂರು: ‘ಕಾಂತಾರ’ ಸಿನಿಮಾ ಜಗತ್ತಿನ ಗಮನಸೆಳೆದು ಬ್ಲಾಕ್ ಬಸ್ಟರ್ ಹಿಟ್ ಆಗಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ‘ಕಾಂತಾರ’ ಕತೆಯನ್ನು ಮತ್ತಷ್ಟು ಬೆಳೆಸಿ ಇನ್ನೊಂದು ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ ರಿಷಬ್ ಶೆಟ್ಟಿ. ‘ಕಾಂತಾರ’ ಸಿನಿಮಾದ ಪ್ರೀಕ್ವೆಲ್ ಅನ್ನು ರಿಷಬ್ ಶೆಟ್ಟಿ ಬರೆದಿದ್ದು, ಚಿತ್ರೀಕರಣವನ್ನೂ ಪ್ರಾರಂಭಿಸಿದ್ದಾರೆ ಎನ್ನಲಾಗುತ್ತಿದೆ.

ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದ್ದು, ಎರಡು ಭಿನ್ನ ಗೆಟಪ್​ನಲ್ಲಿ ರಿಷಬ್ ಕಾಣಿಸಿಕೊಳ್ಳಲಿದ್ದಾರೆ. ‘ಕಾಂತಾರ 2’ ಸಿನಿಮಾದ ಚಿತ್ರೀಕರಣವನ್ನು ರಿಷಬ್ ಶೆಟ್ಟಿ ಬಹಳ ಗುಟ್ಟಾಗಿ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಬಗ್ಗೆ ಸಿನಿಮಾದ ಕತೆಯ ಬಗ್ಗೆ ಗುಟ್ಟನ್ನು ಬಿಟ್ಟುಕೊಡದೆ ಚಿತ್ರೀಕರಣ ಮಾಡುತ್ತಿದ್ದಾರೆ ರಿಷಬ್. ಆದರೆ ಇದೀಗ ರಿಷಬ್​ರ ಹೊಸ ಲುಕ್​ ಬಹಿರಂಗಗೊಂಡಿದ್ದು, ಆ ಲುಕ್ ‘ಕಾಂತಾರ 2’ ಗಾಗಿಯೇ ಮಾಡಲಾಗಿದೆ ಎನ್ನಲಾಗುತ್ತಿದೆ. ‘ಕಾಂತಾರ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ತೆಳ್ಳನೆ ಗಡ್ಡ ಬಿಟ್ಟಿದ್ದ ರಿಷಬ್ ಶೆಟ್ಟಿ ಇದೀಗ ಋಷಿಗಳ ಮಾದರಿಯಲ್ಲಿ ಉದ್ದನೆಯ ಗಡ್ಡ ಬಿಟ್ಟಿದ್ದಾರೆ. ರಿಷಬ್​ರ ಈ ಲುಕ್ ‘ಕಾಂತಾರ 2’ ಸಿನಿಮಾದ್ದು ಎನ್ನಲಾಗುತ್ತಿದೆ.

Umesha HS

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

26 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

53 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago