News Karnataka Kannada
Wednesday, May 01 2024
ಸಾಂಡಲ್ ವುಡ್

ಅಕ್ಟೋಬರ್‌ನಲ್ಲಿ ತೆರೆಗೆ ಬರಲಿದ್ದಾನೆ ‘ಕೋಟಿಗೊಬ್ಬ–3’

Kotigobba 3 24082021
Photo Credit :

ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕೋಟಿಗೊಬ್ಬ–3 ಸಿನಿಮಾ ಬಿಡುಗಡೆಯ ದಿನಾಂಕ ಕೊನೆಗೂ ಫಿಕ್ಸ್ ಆಗಿದೆ. ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಈ ಚಿತ್ರ ಅಕ್ಟೋಬರ್ 14 ರಂದು ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿದುಬಂದಿದೆ.

ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿದ್ದು, ಅಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದೆ. ಮಾರ್ಚ್‌ನಲ್ಲಿ ಆಡಿಯೋ ಬಿಡುಗಡೆ ಮಾಡಲು ನಿರ್ಧರಿಸಿದ್ದ ಚಿತ್ರತಂಡ ಏಪ್ರಿಲ್ ಕೊನೆಯ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಿತ್ತು, ಆದರೆ ಕೊರೋನಾ ಎರಡನೇ ಅಲೆಯಿಂದಾಗಿ ಬಿಡುಗಡೆಯ ಡೇಟ್ ಮುಂದೂಡಲಾಯಿತು.

ಈಗ ಚಿತ್ರಮಂದಿರಗಳು ಶೇ 100 ಸಾಮರ್ಥ್ಯದಲ್ಲಿ ಪುನಃ ತೆರೆಯಲ್ಪಡುತ್ತಿರುವುದರಿಂದ ಕೋಟಿಗೊಬ್ಬ 3 ರಿಲೀಸ್ ಮಾಡಲು ನಿರ್ಧರಿಸಲಾಗಿದೆ. ಚಿತ್ರದ ಸ್ಯಾಟಲೈಟ್, ಡಿಜಿಟಲ್ ಮತ್ತು ಹಿಂದಿ ಡಬ್ಬಿಂಗ್ ಹಕ್ಕುಗಳನ್ನು ಭಾರೀ ಮೊತ್ತಕ್ಕೆ ಮಾರಾಟ ಮಾಡಲಾಗಿದೆ.

ಈ ಚಿತ್ರದ ಮೂಲಕ ಮಲಯಾಳಂ ನಟಿ ಮಡೋನಾ ಸೆಬಾಸ್ಟಿಯನ್ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಕೋಟಿಗೊಬ್ಬ 3 ಸಿನಿಮಾದಲ್ಲಿ ಬಾಲಿವುಡ್ ನಟರಾದ ಶ್ರದ್ಧ ದಾಸ್, ಅಫ್ತಾಬ್ ಶಿವದಾಸನಿ ಮತ್ತು ರವಿಶಂಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು