ಅತ್ಯಾಚಾರ ಸಂತ್ರಸ್ತೆಗೆ ತಕ್ಷಣ ಪರಿಹಾರ ನೀಡಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಇಂದ್ರಜಿತ್‌ ಆಗ್ರಹ

ಮೈಸೂರು: ಅತ್ಯಾಚಾರಕ್ಕೆ ಒಳಗಾಗಿರುವ ಸಂತ್ರಸ್ಥೆಗೆ ತಕ್ಷಣವೇ ಪರಿಹಾರವನ್ನು ನೀಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಮಾದರಿಯೊಂದನ್ನು ಹುಟ್ಟುಹಾಕಬೇಕು ಎಂದು ಚಲನಚಿತ್ರ ನಿರ್ದೇಶಕ ಇಂದ್ರಜೀತ್ ಲಂಕೇಶ್ ಅವರು ಆಗ್ರಹಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಶಿಕ್ಷೆಯಾದ ಬಳಿಕ ಸಂತ್ರಸ್ಥರಿಗೆ ಪರಿಹಾರ ನೀಡುವುದು ಇಲ್ಲಿವರೆಗೂ ನಡೆದು ಬಂದಿರುವ ಕ್ರಮವಾಗಿದೆ. ಆದ್ದರಿಂದ ಮುಖ್ಯಮಂತ್ರಿಯವರು ಹೊಸ ಮಾದರಿಗೆ ನಾಂದಿಯಾಡಬೇಕು ಅಲ್ಲದೇ ಅತಿ ಹೆಚ್ಚು ಪರಿಹಾರವನ್ನು ಸಂತ್ರಸ್ಥೆಯ ಕುಟುಂಬಕ್ಕೆ ನೀಡಬೇಕು ಎಂದು ಒತ್ತಾಯಿಸಿದರು. ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದು ಸುಮಾರು ಮೂರು ದಿನಗಳು ಆಗಿದ್ದರೂ ಸರ್ಕಾರದ ಯಾವೊಬ್ಬ ಸಚಿವರಾಗಲಿ, ಉನ್ನತ ಮಟ್ಟದ ಅಧಿಕಾರಿಗಳಾಗಲಿ ಸಂತ್ರಸ್ಥೆಯ ಆರೋಗ್ಯವನ್ನು ವಿಚಾರಿಸಲು ಹೋಗಿಲ್ಲ. ಆ ಮಾನಿನಿಗೆ ಧೈರ್ಯ ತುಂಬುವ ಕೆಲಸವನ್ನೂ ಮಾಡಿಲ್ಲ. ಇದು ಸರ್ಕಾರದ ಬೇಜಾವಬ್ದಾರಿಯನ್ನು ತೋರಿಸುತ್ತದೆ. ಮೊದಲ ಆಕೆಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.
ಮೈಸೂರಿನಲ್ಲಿ ಕಳೆದ ಮೂರುದಿನದ ಹಿಂದೆ ಹಾಡಹಗಲೇ ಶೂಟೌಟ್ ಆಗಿದೆ. ಆಭರಣದ ಅಂಗಡಿ ದರೋಡೆಯಾಗಿದೆ. ಗ್ಯಾಂಗ್ ರೇಪ್ ಆಗಿದೆ. ಇಷ್ಟೆಲ್ಲ ವೈಫಲ್ಯವಾಗಿದ್ದರೂ ಸರ್ಕಾರದ ಮಟ್ಟದಲ್ಲಿ ತಕ್ಷಣಕ್ಕೆ ಯಾವುದೇ ಕ್ರಮವನ್ನು ತಗೆದುಕೊಂಡಿಲ್ಲ. ಇದು ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಆಡಳಿತ ವೈಫಲ್ಯವನ್ನು ತೋರಿಸುತ್ತದೆ. ಈ ಘಟನೆಗಳನ್ನು ಸರಿಯಾದ ದಿಕ್ಕಿನಲ್ಲಿ ತನಿಖೆ ಮಾಡಲು ಪೊಲೀಸ್ ಇಲಾಖೆಗೆ ಸ್ವಾತಂತ್ರ್ಯ ನೀಡಬೇಕು. ರಾಜಕೀಯ ಮುಖಂಡರು- ಜನಪ್ರತಿನಿಧಿಗಳು ಹಸ್ತಕ್ಷೇಪ ಮಾಡಬಾರದು ಎಂದರು. ಅತ್ಯಾಚಾರದಂತಹ ಪ್ರಕರಣಗಳಿಗೆ ಶಿಕ್ಷೆ ಯಾವ ಪ್ರಮಾಣದಲ್ಲಿ ಇರುತ್ತದೆ ಎನ್ನುವುದರ ಅರಿವು ಯುವಜನಾಂಗಕ್ಕೆ ಇಲ್ಲ. ಆದ್ದರಿಂದ ರಸ್ತೆ ಸಾರಿಗೆ ಬಸ್ಸುಗಳಲ್ಲಿ, ಬಸ್ ನಿಲ್ದಾಣಗಳಲ್ಲಿ ಈ ಕುರಿತು ಹೋಲ್ಡಿಂಗ್ಸ್‌ಗಳನ್ನು ಹಾಕುವ ಮೂಲಕ ಪ್ರಚಾರ ಮಾಡಿ, ಜಾಗೃತಿ ಮೂಡಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಇದರಿಂದಾದರೂ ಪ್ರಕರಣಗಳು ಸ್ವಲ್ಪ ಪ್ರಮಾಣದಲ್ಲಿ ತಗ್ಗಬಹುದು ಎಂದು ಇಂದ್ರಜೀತ್ ಅಭಿಪ್ರಾಯಪಟ್ಟರು.

 

Indresh KC

Recent Posts

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

2 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

12 mins ago

ಉಡುಪಿ: ಇಂದಿನಿಂದ ಮೂರು ದಿನಗಳ ಕರಾವಳಿ ಕಲಾವಿದೆರ್ ತುಳು ನಾಟಕೋತ್ಸವ

ಮಲ್ಪೆಯ ಕರಾವಳಿ ಕಲಾವಿದೆರ್ ತಂಡದಿಂದ ಮೂರು ದಿನಗಳ ತುಳು ನಾಟಕೋತ್ಸವ ಇದೇ ಇಂದಿನಿಂದ (ಮೇ 10) ತೊಟ್ಟಂ ಸಾರ್ವಜನಿಕ ಗಣೇಶೋತ್ಸವ…

17 mins ago

ಇರಾನ್‌ ವಶಪಡಿಸಿಕೊಂಡ ಹಡಗಿನಲ್ಲಿದ್ದ 5 ಭಾರತೀಯ ನಾವಿಕರ ಬಿಡುಗಡೆ

ಟೆಹ್ರಾನ್ ವಶಪಡಿಸಿಕೊಂಡ ಇಸ್ರೇಲಿ-ಸಂಬಂಧಿತ ಹಡಗಿನಲ್ಲಿದ್ದ ಐವರು ಭಾರತೀಯ ನಾವಿಕರನ್ನು ಬಿಡುಗಡೆ ಮಾಡಲಾಗಿದೆ.

33 mins ago

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ 99 ಬ್ಯಾಚ್ ನ 25ನೇ ವರ್ಷಾಚರಣೆ

ಪ್ರತಿಷ್ಠಿತ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ತನ್ನ ಮೊದಲ ಎಂ.ಬಿ.ಬಿ. ಎಸ್. ಬ್ಯಾಚ್ 99 ರ ಗುರುವಂದನ ಮತ್ತು 25ನೇ…

43 mins ago

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

58 mins ago