ಬೆಂಗಳೂರು : ಕಿರುತರೆಯ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿ, ಮುಂದೆ ಬೆಳ್ಳಿತೆರೆಯಲ್ಲಿ ಮಿಂಚುತ್ತಿರುವ ನಟಿ ಅದಿತಿ ಪ್ರಭುದೇವ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ.
ಕರೋನಾ ದಿಂದಾಗಿ ಶೂಟಿಂಗ್ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ, ಅದಿತಿ ತಮ್ಮ ಗದ್ದೆಯಲ್ಲಿ ತಾವೇ ಟ್ರಾಕ್ಟರ್ ಹಿಡಿದು ಉಳುಮೆ ಮಾಡುತ್ತಿರುವ ವಿಡಿಯೋ ಸಖತ್ ವೈರಲ್ ಆಗಿದೆ. ರೈತ ಕುಟುಂಬದ ಹಿನ್ನಲೆಯಿಂದ ಬಂದವಾರಗಿದ್ದಾರೆ.
ಎಲ್ಲರಿಗೂ ನಮಸ್ಕಾರ, ನಾನು ಹಳ್ಳಿಯ ಹೆಣ್ಣು ಮಗಳಾದರೂ, ರೈತ ಕುಟುಂಬದ ಹಿನ್ನೆಲೆ ಇದ್ದರೂ ಈಗಿರುವ ಪರಿಸ್ಥಿತಿಯಲ್ಲಿ ನಾನು ಆಯ್ಕೆ ಮಾಡಿಕೊಂಡಿರುವ ಕ್ಷೇತ್ರವಾಗಲಿ, ಕೆಲಸವಾಗಲಿ, ದಿನಚರಿಯಾಗಲಿ ವಿಭಿನ್ನವಾಗಿ ಇರಬಹುದು. ಆದರೂ ಪ್ರತಿಸಲ ಯಾವುದೇ ಹಳ್ಳಿಗೆ ಹೋದರೂ ಇರುವ ಒಂದೆರಡು ದಿನಗಳಾದರೂ ವಾತಾವರಣವನ್ನು ಪ್ರೀತಿಯಿಂದ ಅನುಭವಿಸುತ್ತೇನೆ. ಪ್ರಕೃತಿಯ ಜೊತೆಗಿನ ನಂಟು ಜೀವನಕ್ಕೆ ಸಾರ್ಥಕತೆಯನ್ನು ನೆಮ್ಮದಿಯನ್ನು ತರುತ್ತದೆ. ಆ ಸಂತೋಷವನ್ನು ಅನುಭವಿಸಿದವರಿಗೆ ಮಾತ್ರ ಗೊತ್ತು’ ಎಂದಿದ್ದಾರೆ ಅದಿತಿ.
‘ಅನೇಕ ಜನರ ಕನಸಂತೆ ನನಗೂ ನನ್ನದೇ ಆದ ಒಂದು ಪುಟ್ಟ ತೋಟ ಮಾಡುವ ಹಂಬಲ. ನೋಡೋಣ, ಮುಂದೊಂದು ದಿನ ಅದು ಆದರೂ ಆಗಬಹುದು. ಅದೆಷ್ಟೋ ಬಾರಿ ಬೆಳೆದ ಫಸಲಿಗೆ ಸೂಕ್ತ ಬೆಲೆ ಸಿಗದಿದ್ದರೂ, ಮೈತುಂಬಾ ಸಾಲವಿದ್ದರೂ ಪ್ರತಿನಿತ್ಯ ಕಷ್ಟಪಟ್ಟು ಕೆಲಸ ಮಾಡಿ ನಮ್ಮೆಲ್ಲರಿಗೂ ಅನ್ನ ನೀಡುತ್ತಿರುವ ದೇವರು ಅನ್ನಬ್ರಹ್ಮ ರೈತನಿಗೆ ಈ ಮೂಲಕ ನಮನ. ಈ ವೀಡಿಯೋ ಪ್ರತಿಯೊಬ್ಬ ರೈತ ಮಿತ್ರನಿಗೆ ಸಮರ್ಪಣೆ’ ಎಂದು ಬರೆದುಕೊಂಡಿದ್ದಾರೆ.
ಅದಿತಿ ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಬ್ಯುಸಿಯಾಗಿದ್ದಾರೆ. ದಿಲ್ಮಾರ್, ತೋತಾಪುರಿ ಸೇರಿ 10-11 ಸಿನಿಮಾಗಳು ಅವರ ಕೈಯಲ್ಲಿವೆ. ಕೊವಿಡ್ ಎರಡನೇ ಅಲೆ ಕಾರಣದಿಂದ ಸಿನಿಮಾ ಕೆಲಸಗಳು ಸಂಪೂರ್ಣವಾಗಿ ನಿಂತಿದ್ದವು. ಈಗ ಕೊವಿಡ್ ಎರಡನೇ ಅಲೆ ಕಡಿಮೆ ಆಗಿದೆ. ಈ ಕಾರಣಕ್ಕೆ ಸಿನಿಮಾ ಕೆಲಸಗಳಿಗೆ ಚುರುಕುಮುಟ್ಟಿಸಲಾಗಿದೆ. ಅದಿತಿ ಕೂಡ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಬಿಡುವು ಸಿಕ್ಕಾಗ ಅವರು ಕೃಷಿ ಮಾಡಿದ್ದಾರೆ.
|
|
ಅದಿತಿ ಉಳುಮೆ ಮಾಡುತ್ತಿರುವ ವಿಡಿಯೋಗೆ ಅಭಿಮಾನಿಗಳು ಫಿದಾ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.