ಸ್ಯಾಂಡಲ್ವುಡ್ನ ನಟಿ ಅಮೂಲ್ಯ ಸೀಮಂತ ಶಾಸ್ತ್ರ ಅದ್ದೂರಿಯಾಗಿ ಜರುಗಿದೆ. ಅಮೂಲ್ಯ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಹಸಿರು ಥೀಮ್ನಲ್ಲಿ ಅದ್ದೂರಿಯಾಗಿ ಸೀಮಂತ ಶಾಸ್ತ್ರ ನಡೆದಿದೆ.
ಸೀಮಂತದ ಫೋಟೋ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ. ಹಲವು ಗಣ್ಯರು ಇದರಲ್ಲಿ ಪಾಲ್ಗೊಂಡಿದ್ದರು. ಈ ಫೋಟೋದಲ್ಲಿ ಅಮೂಲ್ಯ ಕ್ಯೂಟ್ ಆಗಿ ಕಾಣುತ್ತಿದ್ದಾರೆ.
ಫೋಟೋದಲ್ಲಿ ಅಮೂಲ್ಯ ಪತಿ ಜಗದೀಶ್ ಮತ್ತು ಕುಟುಂಬಸ್ಥರು ಹಾಜರಿದ್ದು, ಹೂಗಳಿಂದ ಸಿಂಗಾರಗೊಂಡಿರುವ ವೇದಿಕೆ ಮೇಲೆ ಅಮೂಲ್ಯ ಕುಳಿತುಕೊಂಡಿದ್ದಾರೆ.