News Karnataka Kannada
Wednesday, May 08 2024
ಸಾಂಡಲ್ ವುಡ್

ಇಂದು ರಾಕಿಂಗ್ ಸ್ಟಾರ್ ಯಶ್‌ಗೆ 36 ನೇ ಜನ್ಮದಿನದ ಸಂಭ್ರಮ

Yash
Photo Credit :

ಬೆಂಗಳೂರು:  ನಟ ‘ರಾಕಿಂಗ್ ಸ್ಟಾರ್’ ಯಶ್ ಅವರಿಗೆ ಇಂದು (ಜ.8) 36ನೇ ವರ್ಷದ ಜನ್ಮದಿನ ಸಂಭ್ರಮ.ಯಶ್‌ಗೆ ಹುಟ್ಟುಹಬ್ಬದ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.ಅಭಿಮಾನಿಗಳು ಮತ್ತು ಚಿತ್ರರಂಗ ಗಣ್ಯರು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

1986 ಜನವರಿ 8 ರಂದು ಹಾಸನ ಜಿಲ್ಲೆಯ ಭುವನಹಳ್ಳಿಯಲ್ಲಿ ಜನಿಸಿದ ಯಶ್ ಅವರ ಮೊದಲ ಹೆಸರು ನವೀನ್ ಕುಮಾರ್ ಗೌಡ. ಅಭಿನಯ, ನಾಟಕದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು ಮೊದಲು ಧಾರವಾಹಿಗಳಲ್ಲಿ ಗುರುತಿಸಿಕೊಂಡು ನಂತರ ಕನ್ನಡ ಚಿತ್ರರಂಗದಲ್ಲಿ ಮಿಂಚಿ ‘ಯಶ್‌’ ಆದರು.

ಕೆಜಿಎಫ್ ಚಾಫ್ಟರ್ 1 ಮೂಲಕ ಅವರು ಇಡೀ ಭಾರತೀಯ ಚಿತ್ರರಂಗದ ಸ್ಟಾರ್ ನಟ ಎನಿಸಿಕೊಂಡಿದ್ದಾರೆ. ಆದರೆ ಕಳೆದ ವರ್ಷ ಹಾಗೂ ಈ ವರ್ಷ ಯಶ್‌ ಬರ್ತಡೇಯನ್ನು ಸಾರ್ವಜನಿಕವಾಗಿ ಆಚರಿಸಲು ಅಭಿಮಾನಿಗಳಿಗೆ ಅವಕಾಶ ಸಿಕ್ಕಿಲ್ಲ. ಕೊರೊನಾ ಹಿನ್ನೆಲೆಯಲ್ಲಿ ಯಶ್ ಅವರು ದೂರದಿಂದಲೇ ಶುಭಾಶಯ ತಿಳಿಸಿ ಎಂದು ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳು ಶುಭಾಶಯಗಳನ್ನು ಹೇಳುತ್ತಿದ್ದಾರೆ. ರಾಜ್ಯದ ಹಲವು ಕಡೆಗಳಲ್ಲಿ ಯಶ್‌ ಅಭಿಮಾನಿಗಳು ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು