ಸ್ಯಾಂಡಲ್ವುಡ್: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಟ್ರೇಲರ್ ಇಂದು (ಮಾ.27) ಸಂಜೆ ಬಿಡುಗಡೆಯಾಗಲಿದೆ.
ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ ಚಾಪ್ಟರ್ 2’ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್, ಶ್ರೀನಿಧಿ ಶೆಟ್ಟಿ, ಸಂಜಯ್ ದತ್, ರವೀನಾ ಟಂಡನ್ ಮುಂತಾದ ಪ್ರಮುಖರು ನಟಿಸಿದ್ದಾರೆ.
ಇಂದು ಸಂಜೆ 6.40 ಗಂಟೆಗೆ ‘ಕೆಜಿಎಫ್ ಚಾಪ್ಟರ್ 2’ ಟ್ರೇಲರ್ ಬಿಡುಗಡೆ ನಡೆಯಲಿದೆ. ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲದಲ್ಲಿ ಚಿತ್ರದ ಟ್ರೇಲರ್ ರಿಲೀಸ್ ಆಗಲಿದೆ.
ದಕ್ಷಿಣ ಭಾರತದ ಭಾಷೆಯ ಟ್ರೇಲರ್ ಗಳು ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾದರೆ, ಹಿಂದಿ ಟ್ರೇಲರ್ ಎಕ್ಸೆಲ್ ಮೂವೀಸ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗುತ್ತಿದೆ. ತೆಲುಗು ಟ್ರೇಲರ್ ನ್ನು ನಟ ರಾಮ್ ಚರಣ್ ಬಿಡುಗಡೆ ಮಾಡಲಿದ್ದಾರೆ.
ಚಿತ್ರಕ್ಕೆ ರವಿ ಬಸ್ರೂರು ಸಂಗೀತವಿದ್ದು, ಭುವನ್ ಗೌಡ ಕ್ಯಾಮರಾ ಕೈಚಳಕವಿದೆ. ಚಿತ್ರವು ಏಪ್ರಿಲ್ 14ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.