ಸುದೀಪ್ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ರಿಲೀಸ್ ಆಗಿ ಒಂದು ತಿಂಗಳ ಮೇಲಾಗಿದೆ. ಅನೇಕ ಕಡೆಗಳಲ್ಲಿ ಕಿಚ್ಚ ಸುದೀಪ್ ಚಿತ್ರ ಪ್ರದರ್ಶನ ಕಾಣುತ್ತಿದೆ. ಇದೀಗ ಚಿತ್ರತಂಡ ಸಿನಿಮಾವನ್ನು ಒಟಿಟಿಯಲ್ಲಿ ರಿಲೀಸ್ ಮಾಡೋಕೆ ಮುಂದಾಗಿದೆ. ಇನ್ನು ಕೆಲವೇ ದಿನಗಳಲ್ಲಿ ‘ಕೋಟಿಗೊಬ್ಬ 3’ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ರಿಲೀಸ್ ಆಗುತ್ತಿದೆ.
ಕಿಚ್ಚ ಸುದೀಪ್ ನಟನೆಯ ಈ ಸಿನಿಮಾ ಸಾಕಷ್ಟು ಆಯಕ್ಷನ್ ದೃಶ್ಯಗಳನ್ನು ಹೊಂದಿದೆ. ಸುದೀಪ್ ಅವರು ಡಬಲ್ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಪ್ರೇಕ್ಷಕರಿಗೆ ಸಖತ್ ಥ್ರಿಲ್ ನೀಡಿತ್ತು. ಕೆಲವರು ಎರಡು ಬಾರಿ ಚಿತ್ರಮಂದಿರದತ್ತ ಮುಖ ಮಾಡಿದ್ದರು. ಸಿನಿಮಾ ನೋಡೋಕೆ ಆಗಿರಲಿಲ್ಲದವ್ರಿಗೆ ಸಿಹಿ ಸುದ್ದಿ ಕೊಟ್ಟ ಸಿನಿಮಾ ತಂಡ ನವೆಂಬರ್ 23ರಂದು ಅಮೇಜಾನ್ ಪ್ರೈಮ್ನಲ್ಲಿ ತೆರೆಗೆ ಬರುತ್ತಿದೆ.
ಅಭಿಮಾನಿಯೋರ್ವ ಟ್ವಿಟರ್ನಲ್ಲಿ ಅಮೇಜಾನ್ ಪ್ರೈಮ್ ಹೆಲ್ಪ್ ಡೆಸ್ಕ್ಗೆ ‘ಕೋಟಿಗೊಬ್ಬ 3’ ಯಾವಾಗ ರಿಲೀಸ್ ಆಗುತ್ತದೆ ಎಂದು ಪ್ರಶ್ನೆ ಮಾಡಿದ್ದ. ಅದಕ್ಕೆ ಅಮೇಜಾನ್ ಪ್ರೈಮ್ ವಿಡಿಯೋ ಉತ್ತರ ನೀಡಿದೆ. ನವೆಂಬರ್ 23ಕ್ಕೆ ಸಿನಿಮಾ ರಿಲೀಸ್ ಮಾಡಲಾಗುತ್ತಿದೆ ಎಂದು ಹೇಳಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಯಾಗಿದ್ದಾರೆ.