News Karnataka Kannada
Monday, April 29 2024
ಸಾಂಡಲ್ ವುಡ್

ಕಂಠೀರವ ಸ್ಟುಡಿಯೋದಲ್ಲಿ ರೆಬಲ್‍ಸ್ಟಾರ್ ಅಂಬರೀಶ್ ಸ್ಮಾರಕ ನಿರ್ಮಾಣ

Ambareesh
Photo Credit :

ಬೆಂಗಳೂರು, ಜ.6 : ನಗರದ ಕಂಠೀರವ ಸ್ಟುಡಿಯೋದಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ರೆಬಲ್‍ಸ್ಟಾರ್ ಅಂಬರೀಶ್ ಅವರ ಸ್ಮಾರಕ ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಇಂದು ಅನುಮೋದನೆ ನೀಡಿದೆ.

ಬೆಂಗಳೂರು ಅಭಿವೃದ್ಧಿ ಕುರಿತು ಸಂಪುಟದಲ್ಲಿ ಮಹತ್ವದ ವಿಚಾರಗಳನ್ನು ಚರ್ಚೆ ನಡೆಸಲಾಗಿದೆ. ಕೆ.ಆರ್.ಪುರಂ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ಏತ ನೀರಾವರಿ ಯೋಜನೆಯ ಮೂಲಕ ಬೆಂಗಳೂರು ಪೂರ್ವ ತಾಲ್ಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು 93.50 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಪುನರುಜ್ಜೀವನ ಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಕೇಂದ್ರ ಸರ್ಕಾರದ ನೆರವಿನಲ್ಲಿ ಬೆಂಗಳೂರಿನಲ್ಲಿ ಬಿಎಂಟಿಸಿಯಿಂದ 300 ಎಲೆಕ್ಟ್ರಿಕ್ ಬಸ್‍ಗಳನ್ನು ಕಾರ್ಯಾಚರಣೆ ಮಾಡಲು ಅನುಮೋದನೆ ನೀಡಲಾಗಿದೆ. ಎಲೆಕ್ಟ್ರಿಕ್ ಬಸ್‍ಗಳಿಗಾಗಿ ರಾಜ್ಯ ಸರ್ಕಾರ 100 ಕೋಟಿ ರೂ.ಗಳನ್ನು ನಿಗದಿ ಮಾಡಿದ್ದು, ಕೇಂದ್ರ ಸರ್ಕಾರ ಪ್ರತಿ ಬಸ್‍ಗೆ ಗರಿಷ್ಠ ಬೇಡಿಕೆ ಪ್ರೋತ್ಸಾಹ ಧನ ನೀಡುತ್ತಿದೆ. ಗ್ರಾಸ್ ಕಾಸ್ಟ್ ಕಂಟ್ರಾಕ್ಟ್ ಬಿಡ್ಡಿಂಗ್ ಮೂಲಕ ಬಸ್‍ಗಳ ಕಾರ್ಯಾಚರಣೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು