News Karnataka Kannada
Sunday, April 28 2024
ಸಾಂಡಲ್ ವುಡ್

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​. ಶಿವರಾಮ್ ವಿಧಿವಶ

Shivaram Actor
Photo Credit :

ಕನ್ನಡ ಚಿತ್ರರಂಗದ ಹಿರಿಯ ನಟ ಎಸ್​. ಶಿವರಾಮ್ (83) ಅವರು ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಪ್ರಶಾಂತ್ ಆಸ್ಪತ್ರೆಗೆ ದಾಖಲಾಗಿದ್ದ ಶಿವರಾಮ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಈ ಬಗ್ಗೆ ಶಿವರಾಮ್ ಅವರ ಪುತ್ರ ಲಕ್ಷ್ಮೀಶ ಮಾತನಾಡಿ, ತಂದೆ ಇನ್ನಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಅನೇಕ ದಿಗ್ಗಜರು, ಅಭಿಮಾನಿಗಳು ಶಿವರಾಮ್ ಅವರು ಚಿಕಿತ್ಸೆಗೆ ಸ್ಪಂದಿಸಿ, ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಯಾವ ಪ್ರಾರ್ಥನೆಯೂ ಫಲಿಸಲಿಲ್ಲ.

ಕನ್ನಡದಲ್ಲಿ ಹಲವಾರು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಶಿವರಾಮ್ ಅವರು ಅಭಿನಯ ಮಾಡಿದ್ದರು. ಇತ್ತೀಚೆಗಷ್ಟೇ ಶಿವರಾಮ್ ಅವರಿಗೆ ಅಪಘಾತವಾಗಿ, ತಲೆಗೆ ಪೆಟ್ಟು ಬಿದ್ದಿತ್ತು. ವಯಸ್ಸಿನ ಕಾರಣ ಶಸ್ತ್ರಚಿಕಿತ್ಸೆ ಮಾಡುವುದು ಅಸಾಧ್ಯವಾಗಿತ್ತು.
ಕನ್ನಡ ಚಿತ್ರರಂಗದಲ್ಲಿ ಆರು ದಶಕಗಳ ಕಾಲ ನೂರಾರು ಸಿನಿಮಾಗಳಲ್ಲಿ ಶಿವರಾಮ್ ಅವರು ಅಭಿನಯ ಮಾಡಿದ್ದರು. ಪೋಷಕ ನಟನಾಗಿ, ಹಾಸ್ಯನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿಯೂ ಕೊಡುಗೆ ನೀಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು