News Karnataka Kannada
Friday, May 10 2024
ಸಾಂಡಲ್ ವುಡ್

ಕನ್ನಡ ನಟಿ ಭಾವನಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Bavana Ramanna
Photo Credit :

ಬೆಂಗಳೂರು, ನ.16 : ಕನ್ನಡ ನಟಿ ಭಾವನಾ ಪುನಃ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. 2018ರಲ್ಲಿ ವಿಧಾನಸಭೆ ಚುನಾವಣೆಗೆ 2 ದಿನಗಳು ಇರುವಾಗ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.
ನಟಿ ಭಾವನಾ ರಾಮಣ್ಣ ಕಾಂಗ್ರೆಸ್ ಸೇರ್ಪಡೆ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಮಂಗಳವಾರ ಟ್ವೀಟ್ ಮಾಡಿದ್ದಾರೆ. ಭಾವನಾ ಭೇಟಿಯಾದ ಫೋಟೋವನ್ನು ಸಹ ಟ್ವೀಟ್ ಮಾಡಿದ್ದಾರೆ.

“ಕಾಂಗ್ರೆಸ್‌ನ ಮಾಜಿ ಕಾರ್ಯಕರ್ತೆ, ಕನ್ನಡದ ನಟಿ ಭಾವನಾ ರಾಮಣ್ಣ ಅವರು ನನ್ನನ್ನು ಭೇಟಿಯಾದರು. ಕರ್ನಾಟಕದಲ್ಲಿ ಕಾಂಗ್ರೆಸ್ ಸೇರಿ, ಪಕ್ಷಕ್ಕಾಗಿ ದುಡಿಯುವ ಸಂಕಲ್ಪವನ್ನು ಅವರು ಮಾಡಿದ್ದಾರೆ. ಪ್ರತಿಯೊಬ್ಬರ ಸೇರ್ಪಡೆಯೊಂದಿಗೆ ಕಾಂಗ್ರೆಸ್ ಪ್ರಾಬಲ್ಯ ಪಡೆಯಲಿದೆ ಎಂದು ನಾನು ನಿಶ್ಚಿತವಾಗಿ ಭಾವಿಸಿದ್ದೇನೆ, ಅವರಿಗೆ ಶುಭಾಶಯಗಳು” ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಭಾವನಾ ರಾಮಣ್ಣ ಈ ಮೊದಲು ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದರು. ಕರ್ನಾಟಕ ರಾಜ್ಯ ಬಾಲಭವನ ಸೊಸೈಟಿಯ ಅಧ್ಯಕ್ಷೆಯಾಗಿದ್ದರು. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಚಿತ್ರದುರ್ಗದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಆದರೆ ಕಾಂಗ್ರೆಸ್ ಟಿಕೆಟ್ ಸಿಗಲಿಲ್ಲ. ಆಗ ಭಾವನಾ ರಾಮಣ್ಣ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದರು. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ 2 ದಿನಗಳು ಇರುವಾಗ ಅಂದಿನ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ್‌ ರಾವ್ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದರು.

2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮೊದಲು ವಿವಿಧ ಪಕ್ಷಗಳ ನಾಯಕರು ಪಕ್ಷ ಬದಲಾವಣೆ ಮಾಡುವುದು ಸಹಜವಾಗಿದೆ. ಚುನಾವಣೆ ಗಮನದಲ್ಲಿಟ್ಟುಕೊಂಡು ಭಾವನಾ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು