‘ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಕಿರುಹೊತ್ತಿಗೆ ಬಿಡುಗಡೆ

ಬೆಂಗಳೂರು: ಡಾ. ವಿಷ್ಣುವರ್ಧನ್ ಅವರ 71ನೇ ಜನ್ಮದಿನದ ಅಂಗವಾಗಿ ಡಾ.ವಿಷ್ಣುಸೇನಾ ಸಮಿತಿಯು ‘ಕರುನಾಡ ಯಜಮಾನ ಡಾ.ವಿಷ್ಣುವರ್ಧನ್’ ಎಂಬ ಕಿರುಹೊತ್ತಿಗೆಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ವಿತರಿಸುವ ದೃಷ್ಠಿಯಿಂದ ಹೊರತಂದಿದೆ. ಸದರಿ ಕೃತಿಯನ್ನು ಕನಿಷ್ಠ ಒಂದು ಲಕ್ಷ ಮಕ್ಕಳಿಗೆ ವಿತರಿಸುವ ಗುರಿಯನ್ನು ಹೊಂದಿದೆ.

ಶರಣು ಹುಲ್ಲೂರ್ ಅವರು ಬರೆದ ಕರುನಾಡ ಯಜಮಾನ ಡಾ.ವಿಷ್ಣುವರ್ಧನ ಎಂಬ ಕೃತಿಯನ್ನು ಸಚಿವರು ತಮ್ಮ ಕಚೇರಿಯಲ್ಲಿ ಇಂದು ಬಿಡುಗಡೆಗೊಳಿಸಿದರು.

ಸಿನಿಮಾ, ಜನಪರ ಕಾರ್ಯಗಳ ಮೂಲಕ ಡಾ.ವಿಷ್ಣುವರ್ಧನ್ ಅವರು ಯಾವತ್ತಿಗೂ ನಮ್ಮೊಂದಿಗೆ ಇರುತ್ತಾರೆ. ಅವರ ಆದರ್ಶ ಬದುಕು, ನಾಡು, ನುಡಿಯ ಬಗೆಗಿನ ಅಭಿಮಾನ ಮತ್ತು ಜೀವಪರ ಕಾಳಜಿ ನಮಗೆಲ್ಲ ಮಾದರಿಯಾಗಿದೆ. ಅವರು ಜೀವನದಲ್ಲಿ ಸಾಕಷ್ಟು ಕಷ್ಟಗಳನ್ನು ಎದುರಿಸಿದರೂ, ಕೊನೆಗೂ ಗೆದ್ದದ್ದು ಅವರ ಶ್ರಮ. ಹಾಗಾಗಿ ಮಕ್ಕಳಿಗೆ ಡಾ.ವಿಷ್ಣು ಬದುಕಿನ ಕುರಿತು ಪರಿಚಯ ಆಗಬೇಕಿದೆ. ಆ ಕಾರಣದಿಂದ ಡಾ.ವಿಷ್ಣು ಅವರ ಬದುಕು ಸಾಧನೆಗಳನ್ನು ಪಠ್ಯದಲ್ಲಿ ಸೇರಿಸಲು ಡಾ.ವಿಷ್ಣು ಸೇನಾ ಸಮಿತಿ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಚಿವರು “ಪಠ್ಯಪುಸ್ತಕ ಸಮಿತಿ” ಗೆ ನಿಮ್ಮ ಮನವಿಯನ್ನು ಶಿಫಾರಸ್ಸುಗೊಳಿಸುವುದಾಗಿ ತಿಳಿಸಿದರು.

Raksha Deshpande

Recent Posts

ಪುಷ್ಪ ಸಿನಿಮಾ ಮಾಡಿ ನನ್ನ ಜೀವನ ಬದಲಾಗಿಲ್ಲ ಎಂದ ಬಹುಭಾಷಾ ನಟ ಫಾಹದ್ ಫಾಸಿಲ್

ಬಹುಭಾಷಾ ನಟ ಫಾಹದ್ ಫಾಸಿಲ್ ಪುಷ್ಪ ಸಿನಿಮಾದಿಂದ ನನ್ನ ಜೀವನ ಬದಲಾಗಿಲ್ಲ, ಪುಷ್ಪ ಮಾಡಿದ್ದಕ್ಕೆ ನನಗೇನು ಸಿಕ್ತು ಅನ್ನೋದು ತಪ್ಪು…

15 mins ago

ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ತಿರುಗೇಟು ನೀಡಿದ ಪ್ರಧಾನಿ

 ಸ್ಯಾಮ್ ಪಿತ್ರೋಡಾ ಅವರ ‘ಜನಾಂಗೀಯ’ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ದೇಶದ ಜನರನ್ನು ಅವರ ಬಣ್ಣದ ಆಧಾರದ ಮೇಲೆ…

16 mins ago

ʼಕೋವಿಶೀಲ್ಡ್ ಲಸಿಕೆ ಪಡೆದವರು ಡ್ಯಾನ್ಸ್ ಮಾಡುವಂತಿಲ್ಲʼ ಎಚ್ಚರಿಕೆ ನೀಡಿದ ಆಮಂತ್ರಣ ಪತ್ರಿಕೆ

ಕೊರೊನಾ ಲಸಿಕೆ ಕೋವಿಶೀಲ್ಡ್​ ಅಭಿವೃದ್ಧಿ ಪಡಿಸಿದ್ದ ದೈತ್ಯ ಫಾರ್ಮಾ ಕಂಪನಿ ಅಸ್ಟ್ರಝೆನೆಕಾ, ಕೋರ್ಟ್​ ಮುಂದೆ ಸತ್ಯವೊಂದನ್ನು ಒಪ್ಪಿಕೊಂಡಿದೆ. ಅದು ಏನೆಂದರೆ…

40 mins ago

ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹರಡಿದರೆ ಕಠಿಣ ಕ್ರಮ: ಪೊಲೀಸ್ ಇಲಾಖೆ

ಸಾಮಾಜಿಕ ಜಾಲತಾಣಗಳಲ್ಲಿ ಬೇರೆ-ಬೇರೆ ಸಮುದಾಯ, ಜಾತಿ, ಧರ್ಮ, ವ್ಯಕ್ತಿಗಳ ವಿರುದ್ಧ ಉದ್ದೇಶ  ಪೂರ್ವಕವಾಗಿ ಸುಳ್ಳು ಸುದ್ದಿಗಳನ್ನು ಹರಿಬಿಡುವುದು ಹಾಗೂ ತಮಾಷೆಗಾಗಿ…

49 mins ago

ಮಗುವಿಗೆ ಜನ್ಮ ನೀಡಿದ 13 ವರ್ಷದ ಬಾಲಕಿ: ಇಬ್ಬರು ಪೊಲೀಸರ ವಶಕ್ಕೆ

13 ವರ್ಷದ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದೆ.

58 mins ago

ನಾಳೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶಕ್ಕೆ ದಿನಾಂಕ ನಿಗದಿಯಾಗಿದ್ದು, ನಾಳೆ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 hour ago