ಬೆಂಗಳೂರು : ಅಭಿನಯ ಚಕ್ರವರ್ತಿ ಸುದೀಪ್ ನಟನೆಯ ಕೋಟಿಗೊಬ್ಬ3 ಸಿನಿಮಾ ರಿಲೀಸ್ ಡೇಟ್ ಕೊನೆಗೂ ಫಿಕ್ಸ್ ಆಗಿದೆ. ಶಿವ ಕಾರ್ತಿಕ್ ನಿರ್ದೇಶಿಸಿ, ಸೂರಪ್ಪ ಬಾಬು ನಿರ್ಮಿಸಿರುವ ಕಮರ್ಷಿಯಲ್ ಎಂಟರ್ನೈಮೆಂಟ್ ಕೋಟಿಗೊಬ್ಬ 3 ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.
ಅಕ್ಟೋಬರ್ 14 ರಂದು ಸಿನಿಮಾ ರಿಲೀಸ್ ಆಗಲಿದೆ, ಸೆಪ್ಟಂಬರ್ 2 ರಂದು ಸುದೀಪ್ ಹುಟ್ಟುಹಬ್ಬವಿದ್ದು, ಅಂದು ಚಿತ್ರತಂಡ ಅಧಿಕೃತ ಮಾಹಿತಿ ನೀಡಲಿದೆ.
ಮಾರ್ಚ್ ನಲ್ಲಿ ಆಡಿಯೋ ಬಿಡುಗಡೆ ಮಾಡಲು ನಿರ್ಧರಿಸಿದ್ದ ಚಿತ್ರತಂಡ ಏಪ್ರಿಲ್ ಕೊನೆಯ ವಾರದಲ್ಲಿ ಸಿನಿಮಾ ರಿಲೀಸ್ ಮಾಡಲು ಪ್ಲಾನ್ ಮಾಡಿತ್ತು, ಆದರೆ ಕೊರೋನಾ ಎರಡನೇ ಅಲೆಯಿಂದಾಗಿ ಬಿಡುಗಡೆಯ ಡೇಟ್ ಮುಂದೂಡಲಾಯಿತು.