‘ಕುಂತೀಪುತ್ರ’ ಚಿತ್ರೀಕರಣ ಸಂಪೂರ್ಣ

ಬೆಂಗಳೂರು: ಕಲಬುರಗಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದ ‘ಕುಂತಿ ಪುತ್ರ’ ಚಿತ್ರದ ಚಿತ್ರೀಕರಣ ಪೂರ್ತಿಗೊಂಡಿದೆ. ಇತ್ತೀಚಿಗಷ್ಟೆ ಚಿತ್ರದ ಮೇಕಿಂಗ್ ದೃಶ್ಯಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ‘ಕುಂತಿ ಪುತ್ರ’ ಚಿತ್ರಕ್ಕೆ ರಾಜು ಬೋನಗಾಣಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ತೆಲುಗಿನ ಹಲವಾರು ಚಲನಚಿತ್ರಗಳಿಗೆ ಕೆಲಸ ಮಾಡಿದ ನಿರ್ದೇಶಕ-ನಿರ್ಮಾಪಕರು ಸೇರಿಕೊಂಡು ಕನ್ನಡ ಭಾಷೆಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿರುವುದು ವಿಶೇಷ.

ರಾಜು ಅವರ ಪ್ರಯತ್ನಕ್ಕೆ ಪೂರಕವಾಗಿ ಶಶಾಂಕ್ ಗೌಡ ಮತ್ತು ದೇವೇಂದ್ರಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಕನ್ನಡದಲ್ಲಿ ಮೊದಲು ಚಿತ್ರವನ್ನು ಬಿಡುಗಡೆ ಮಾಡಿ ಆನಂತರ ತೆಲುಗಿಗೆ ಡಬ್ ಮಾಡುವ ಯೋಜನೆಯನ್ನೂ ಚಿತ್ರತಂಡ ಹೊಂದಿದೆ. 90ರ ದಶಕದಲ್ಲಿ ನಡೆದ ಘಟನೆ ಆಧರಿಸಿ ಚಿತ್ರ ಮಾಡಲಾಗಿದೆ‌. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ.

ಚಿತ್ರದ ಕಥೆಯ ಬಗ್ಗೆ ಹೆಚ್ಚಿನ ಮಾಹಿತಿ ಬಿಟ್ಟುಕೊಡದ ನಿರ್ದೇಶಕ ರಾಜು ಬೋನಗಾನಿ, ತೆಲುಗಿನಲ್ಲಿ ಹಲವು ವರ್ಷಗಳ ಕಾಲ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದು, ಇದೇ ಮೊದಲ ಬಾರಿಗೆ ನಿರ್ದೇಶನಕ್ಕಿಳಿದಿದ್ದೇನೆ ಎಂದರು. ನಾಯಕ ಗೋಪಿಕೃಷ್ಣ, ಹಳ್ಳಿ ಸೊಗಡಿನ ಕಥೆಯಲ್ಲಿ ಸ್ನೇಹ-ಪ್ರೀತಿ ಸೇರಿದಂತೆ ಎಲ್ಲವೂ ಚಿತ್ರದಲ್ಲಿ ಅಡಕವಾಗಿದೆ. ಪಾಂಡವಪುರ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಜೊತೆಗೆ ನೈಜತೆಗೆ ಒತ್ತು ನೀಡಲಾಗಿದೆ. ಈ ಹಿಂದೆ ಅವರು ಮೂರು ಚಿತ್ರಗಳಲ್ಲಿ ನಟಿಸಿದ್ದು ಅದರಲ್ಲಿ ಒಂದು ಚಿತ್ರ ಬಿಡುಗಡೆಯಾಗಿದೆ ಎಂದು ಹೇಳಿದರು.

ಚಿತ್ರದಲ್ಲಿ ಪ್ರಿಯಾಂಕಾ ಚೌಧರಿ ನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಆರತಿ ರಾಜ್. ವಿಜಯಪ್ರಕಾಶ್ ಸೇರಿದಂತೆ ಹಲವು ಮಂದಿ ನಟಿಸಿದ್ದಾರೆ. ದಿಲೀಪ್ ಭಂಡಾರಿ ಅವರ ಸಂಗೀತ ಮತ್ತು ಈಶ್ವರ್ ಅವರು ಛಾಯಾಗ್ರಹಣ ಹೊಣೆ ಹೊತ್ತುಕೊಂಡಿದ್ದಾರೆ.

Raksha Deshpande

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

3 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

3 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

3 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

3 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

5 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

5 hours ago