ಬೆಂಗಳೂರು : ಭಾನುವಾರ ಪಂಚಭಾಷೆಗಳಲ್ಲಿ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿಯನದ ಬಹುನಿರೀಕ್ಷಿತ ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದ್ದು, ಬಿಡುಗಡೆಯಾದ 24 ಗಂಟೆಗಳಲ್ಲಿ 109 ಮಿಲಿಯನ್ ಗೂ ಹೆಚ್ಚು ವೀಕ್ಷಣೆ ಪಡೆಯುವ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ.
ರಾಕಿಂಗ್ ಸ್ಟಾರ್ ಯಶ್ ಜೊತೆಗೆ ಬಾಲಿವುಡ್ ನಟ ಸಂಜಯ್ ದತ್, ನಟಿ ರವೀನಾ ಟಂಡನ್ ಕೆಜಿಎಫ್ ಚಾಪ್ಟರ್ 2 ನಲ್ಲಿ ಅಭಿನಯಿಸಿದ್ದು, ಪಂಚ ಭಾಷೆಗಳಲ್ಲಿಯೂ ಟ್ರೈಲರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕನ್ನಡದ ಟ್ರೇಲರ್ ಟ್ರೆಂಡಿಂಗ್ ನಲ್ಲಿ ನಂಬರ್ 1 ಸ್ಥಾನದಲ್ಲಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಟ್ರೇಡ್ ಅನಾಲಿಸ್ಟ್ ಮನೋಬಲ ವಿಜಯ್ ಬಾಲನ್, ಕೆಜಿಎಫ್ ಚಾಪ್ಟರ್ 2 ಟ್ರೈಲರ್ ಕನ್ನಡದಲ್ಲಿ 18 ಮಿಲಿಯನ್, ತೆಲುಗಿನಲ್ಲಿ 20 ಮಿಲಿಯನ್, ಹಿಂದಿಯಲ್ಲಿ 51 ಮಿಲಿಯನ್, ತಮಿಳು 12 ಮಿಲಿಯನ್, ಮಲಯಾಳಂನಲ್ಲಿ 8 ಮಿಲಿಯನ್ ವೀಕ್ಷಣೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…