ಕೆಜಿಎಫ್ ಚಾಪ್ಟರ್-2 ಬಿಡುಗಡೆ ಮುನ್ನ ದೇವರ ಮೊರೆ ಹೋದ ರಾಕಿಂಗ್ ಸ್ಟಾರ್ ಯಶ್

ಮಂಗಳೂರು : ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್-2 ಬಿಡುಗಡೆಗೆ ಮುನ್ನ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಾದ ಧರ್ಮಸ್ಥಳ,  ಕುಕ್ಕೆ ಸುಬ್ರಹ್ಮಣ್ಯ ಹಾಗೂ  ಸುರ್ಯ ಸದಾಶಿವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಇಂದು ಬೆಳ್ಳಂಬೆಳಗ್ಗೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಧರ್ಮಸ್ಥಳ ಮಂಜುನಾಥ ದೇಗುಲಕ್ಕೆ ಬಂದ ಅವರನ್ನು ಅಭಿಮಾನಿಗಳು ಸುತ್ತುವರಿದರು, ಪೊಲೀಸರ ಭದ್ರತೆಯಲ್ಲಿ ನಂತರ ಮಂಜುನಾಥ ದೇಗುಲಕ್ಕೆ ತೆರಳಿ ದೇವರ ದರ್ಶನ ಪಡೆದರು. ಏಪ್ರಿಲ್ 14ಕ್ಕೆ ಕೆಜಿಎಫ್-2 ಬಿಡುಗಡೆ ಹಿನ್ನೆಲೆಯಲ್ಲಿ ದೇವರ ಮೊರೆ ಹೋಗಿದ್ದಾರೆ, ಅವರ ಜೊತೆ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಇದ್ದರು. ಇನ್ನು ಅಲ್ಲಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದ ಯಶ್ ಸರದಿ ಸಾಲಿನಲ್ಲಿ ನಿಂತು ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ನಂತರ ಸುರ್ಯ ಸದಾಶಿವೇಶ್ವರ ದೇವರ ದರ್ಶನ ಪಡೆದರು.

2018ರಲ್ಲಿ ಕೆಜಿಎಫ್ ಮೊದಲ ಭಾಗ ತೆರೆ ಕಾಣುವುದಕ್ಕೆ ಕೆಲ ದಿನಗಳ ಮೊದಲು ಇದೇ ರೀತಿ ನಿರ್ಮಾಪಕ ವಿಜಯ್ ಕಿರಗಂದೂರು ಜೊತೆ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ,ಸುರ್ಯ ಸದಾಶಿವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿ ಬಂದಿದ್ದರು.

Gayathri SG

Recent Posts

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

7 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

18 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

32 mins ago

ಸೊಳ್ಳೆ ‘ಟ್ವೀಟ್ ಕಳುಹಿಸುವ’ ಫೋಟೋ ವೈರಲ್‌

ನಾವು ಪ್ರತಿದಿನ ಸೋಶಿಯಲ್‌ ಮಿಡಿಯಾಗಳಲ್ಲಿ ಹಲವಾರು ಟ್ವೀಟ್‌ಗಳು ಮತ್ತು ಪೋಸ್ಟ್ ಗಳನ್ನು ನೋಡುತ್ತೇವೆ.ಅದರಲ್ಲೂ ಕೆಲ ಪೋಸ್ಟ್‌ ಗಳು ನಮ್ಮನ್ನು ನಗುವಂತೆ…

47 mins ago

ಪಾಕಿಸ್ತಾನವನ್ನು ನಾವು ಗೌರವಿಸಬೇಕು ಎಂದ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌

ಈ ಹಿಂದೆಯೂ ಪಾಕಿಸ್ತಾನವನ್ನು ಹಾಡಿಹೊಗಳಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್‌ ಮಾಜಿ ಸಚಿವ ಮಣಿಶಂಕರ್ ಅಯ್ಯರ್‌ ಈಗ ಮತ್ತೊಂದು ವಿವಾದಾತ್ಮಕ…

48 mins ago

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

1 hour ago