News Karnataka Kannada
Monday, May 06 2024
ಸಾಂಡಲ್ ವುಡ್

‘ಕೆಜಿಎಫ್​: 2 ಚಿತ್ರದ ಟ್ರೈಲರ್‌ ಬಿಡುಗಡೆಗೆ ದಿನಾಂಕ ನಿಗದಿ

Kgf 2
Photo Credit : News Kannada

ಯಶ್​ ನಟನೆಯ ‘ಕೆಜಿಎಫ್​: 2 ಚಿತ್ರದ ಬಿಡುಗಡೆಗೆ ವಿಶ್ವದಾದ್ಯಂತ ಅಭಿಮಾನಿಗಳು ಕಾದು ಕುಳಿತಿದ್ದಾರೆ. ಈ ನಡುವೆ ಚಿತ್ರತಂಡ ಹೊಸ ಅಪ್ಡೇಟ್‌ ನೀಡಿದ್ದು, ಚಿತ್ರದ ಟ್ರೈಲರ್‌ ಬಿಡುಗಡೆಗೆ ದಿನಾಂಕ ನಿಗದಿ ಮಾಡಿದೆ.

ಮಾರ್ಚ್​ 27ರಂದು ‘ಕೆಜಿಎಫ್​ 2’ ಟ್ರೇಲರ್​ ಲಾಂಚ್​ ಆಗಲಿದೆ. ಈ ಕುರಿತು ಚಿತ್ರದ ನಿರ್ದೇಶಕ ಪ್ರಶಾಂತ್‌ ನೀಲ್‌ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಚಂಡಮಾರುತದ ಮೊದಲು ಯಾವಾಗಲೂ ಗುಡುಗು ಇರುತ್ತದೆ!.

ಕೆಜಿಎಫ್‌: 2 ಟ್ರೈಲರ್‌ ಮಾ.27 ರಂದು ಸಂಜೆ 6.40ಕ್ಕೆ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಬಿಡುಗಡೆ ಕಾಣಲಿದೆ ಎಂದು ಬರೆದುಕೊಂಡಿದ್ದಾರೆ.

2018 ರಲ್ಲಿ ರಿಲೀಸ್‌ ಆಗಿದ್ದ ಕೆಜಿಎಫ್‌: ಚಾಪ್ಟರ್‌ 1 ಭಾರತೀಯ ಸಿನಿರಂಗದಲ್ಲಿ ಹೊಸ ಸಂಚಲನ ಹುಟ್ಟುಹಾಕಿತ್ತು. ಕನ್ನಡ ಚಿತ್ರರಂಗದ ಖ್ಯಾತಿಯನ್ನು ಮುಗಿಲೆತ್ತರಕ್ಕೆ ಕೊಂಡೊಯ್ದಿತ್ತು. ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್‌ ನಡಿ ನಿರ್ಮಾಣವಾಗುತ್ತಿರುವ ಚಿತ್ರದಲ್ಲಿ ನಟ ಯಶ್‌ ಅವರೊಂದಿಗೆ ಪ್ರಕಾಶ್‌ ರಾಜ್‌, ಬಾಲಿವುಡ್‌ ನ ಸಂಜಯ್‌ ದತ್‌, ರವಿನಾ ಟಂಡನ್‌, ತೆಲುಗು ನಟ ರಾವ್‌ ರಮೇಶ್‌ ಸೇರಿದಂತೆ ದೊಡ್ಡ ತಾರಾಬಳಗವಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು