ಕೇಂದ್ರ ಸಚಿವ ಡಾ. ಎಲ್. ಮುರುಗನ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ

ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಡಾ. ಎಲ್. ಮುರುಗನ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಭೇಟಿ ನೀಡಿದರು. ಈ ವೇಳೆ ಕರ್ನಾಟಕದಲ್ಲಿ ಅನಿಮಲ್ ವೆಲ್ಫೇರ್ ಬೋರ್ಡ್ ಸ್ಥಾಪನೆ, ಬೆಂಗಳೂರಿನಲ್ಲಿ ಹಿಂದಿ ಡಬ್ಬಿಂಗ್ ಚಿತ್ರಗಳ ಸೆನ್ಸಾರ್​​ಗೆ ಅವಕಾಶ, ದೂರದರ್ಶನದಲ್ಲಿ ಎಲ್ಲಾ ಚಿತ್ರಗಳನ್ನು ಪ್ರಸಾರ ಮಾಡುವ ಬಗ್ಗೆ ಹೆಚ್ಚುವರಿ ಮತ್ತೊಬ್ಬ ಸೆನ್ಸಾರ್ ಅಧಿಕಾರಿ ನೇಮಿಸುವ ಕುರಿತು ಚರ್ಚೆ ನಡೆದಿದೆ.

ಸಭೆ ಕುರಿತು ಮಾತನಾಡಿದ ನಟ ಶಿವರಾಜಕುಮಾರ್ , ‘ಅನಿಮಲ್ ಬೋರ್ಡ್ ಸಮಸ್ಯೆ ಯಾವಾಗ್ಲು ಆಗ್ತಿದೆ. ಹಿಂದಿ ಸೆನ್ಸಾರ್ ಬೋರ್ಡ್ ಸಮಸ್ಯೆಯೂ ಹೆಚ್ಚಾಗಿದೆ. ಈಗ ಕೇಂದ್ರ ಸಚಿವರು ನಮ್ಮ ವಾಣಿಜ್ಯ ಮಂಡಳಿಗೆ ಬಂದಿದ್ದಾರೆ.

ನಮ್ಮ ಚಿತ್ರರಂಗದ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರು ಗಮನ ಹರಿಸಿ ಅದನ್ನು ಬಗೆ ಹರಿಸ್ತಾರೆ ಅನ್ನೋ ನಂಬಿಕೆ ಇದೆ. ಮುರುಗುನ್​ ಅಂದರೆ ದೇವರು. ಆ ದೇವರು ಎಂದಿಗೂ ನಮ್ಮ ಕೈಬಿಡುವುದಿಲ್ಲ’ ಎಂದರು​.

ಈ ಬಗ್ಗೆ ಪ್ರತಿಕ್ರಿಯಿಸಿದ ಮುರುಗನ್​, ‘ನಾನು ದಕ್ಷಿಣ ಭಾರತದ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆ ಮಾತಮಾಡಿದ್ದೇನೆ. ನಮ್ಮ ಸರ್ಕಾರ ಚಿತ್ರರಂಗದ ಪರವಾಗಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ವೆಬ್ ಸೈಟ್ ನಲ್ಲಿ ಸಿನಿಮಾ ಶೂಟಿಂಗ್ ಬಗ್ಗೆ ಎಲ್ಲಾ ಮಾಹಿತಿ‌ ಇದೆ. ಹಿಂದಿ ಭಾಷೆ ಸೆನ್ಸಾರ್ ಕರ್ನಾಟಕದಲ್ಲೇ ಆಗಬೇಕು ಅಂತ ಮನವಿ‌ ಕೊಟ್ಡಿದ್ದಾರೆ.

ಕನ್ನಡ ಚಿತ್ರರಂಗಕ್ಕೆ ಸಹಾಯ ಆಗೋ ಹಾಗೆ ನೆನ್ಸಾರ್ ಆಗೋ ಬಗ್ಗೆ ಗಮನ ಹರಿಸುತ್ತೇವೆ. ಥಿಯೇಟರ್ ಟ್ಯಾಕ್ಸ್ ಕಟ್ಟೋದನ್ನ ಕೇಂದ್ರ ಸರ್ಕಾರ ಮನ್ನ ಮಾಡಿದೆ. ರಾಜ್ಯ ಸರ್ಕಾರದಿಂದ 120 ಸಿನಿಮಾಗಳಿಗೆ 10 ಲಕ್ಷ ಸಬ್ಸಿಡಿ‌ ಕೊಟ್ಟಿದ್ದಾರೆ. ಕನ್ನಡ ಸಿನಿಮಾಗಳ ಬ್ಯೂಸಿನೆಸ್ ಚೆನ್ನಾಗಿ ಆಗೋದಕ್ಕೆ ಎಲ್ಲಾ ಕ್ರಮಗಳನ್ನು ತೆಗೆದುಕೊಳುತ್ತೇವೆ. ಸಮ್ಮ ಸರ್ಕಾರ ಚಿತ್ರರಂಗದ ಜೊತೆಗಿರುತ್ತೆ’ ಎಂದರು.

Sneha Gowda

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

5 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

6 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

6 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

6 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

7 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

7 hours ago