News Karnataka Kannada
Tuesday, April 30 2024
ಸಾಂಡಲ್ ವುಡ್

ಕ್ರೇಜಿಸ್ಟಾರ್ ವಿ.ರವಿಚಂದ್ರನ್ ತಾಯಿ ವಿಧಿವಶ

Ravichandran
Photo Credit :

ಬೆಂಗಳೂರು : ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ತಾಯಿ ಪಟ್ಟಮ್ಮಲ್ ವೀರಸ್ವಾಮಿ (83) ಅವರು, ಇಂದು ವಿಧಿವಶರಾಗಿದ್ದಾರೆ.

ಖ್ಯಾತ ನಟ, ನಿರ್ದೇಶಕ ಹಾಗೂ ನಿರ್ಮಾಪಕ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಲ್ ವೀರಸ್ವಾಮಿಯವರು, ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ರಾಜಾಜಿನಗರದ ಸುಗುಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೂಡ ಪಡೆಯುತ್ತಿದ್ದರು.

ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ವಿ.ರವಿಚಂದ್ರನ್ ಅವರ ತಾಯಿ ಪಟ್ಟಮ್ಮಲ್ ವೀರಸ್ವಾಮಿಯವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿರೋದಾಗಿ ತಿಳಿದು ಬಂದಿದೆ. ಅವರ ಅಂತ್ಯಕ್ರಿಯೆಯನ್ನು ಇಂದು ಸಂಜೆ ನೆರವೇರಿಸಲಾಗುತ್ತದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು