News Karnataka Kannada
Tuesday, April 30 2024
ಸಾಂಡಲ್ ವುಡ್

ಗೌರವ ಡಾಕ್ಟರೇಟ್​ ಪದವಿ ಸ್ವೀಕರಿಸಿದ ಕ್ರೇಜಿಸ್ಟಾರ್ ರವಿಚಂದ್ರನ್

Ravi Chandran
Photo Credit : G Mohan

ಬೆಂಗಳೂರು : ಕ್ರೇಜಿಸ್ಟಾರ್, ನಟ ರವಿಚಂದ್ರನ್​ ಅವರು ಇಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಚೊಚ್ಚಲ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್​ ಪದವಿ ಸ್ವೀಕರಿಸಿದರು.

ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನಟ ರವಿಚಂದ್ರನ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರ್ ಪ್ರದಾನ ಮಾಡಿದರು. 85ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಿರ್ದೇಶಕ, ನಟ, ನಿರ್ಮಾಪಕ, ಸಂಗೀತ, ಸಂಭಾಷಣೆ, ಗೀತರಚನೆ ಸೇರಿದಂತೆ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ.

ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರವಿಚಂದ್ರನ್ ಪತ್ನಿ ಸುಮತಿ, ಮಕ್ಕಳಾದ ವಿಕ್ರಮ್, ಮನೋರಂಜನ್, ಗೀತಾಂಜಲಿ, ಅಳಿಯ ಅಜಯ್ ಭಾಗಿಯಾಗಿದ್ದರು. ಇದೇ ವೇಳೆ ಮೊದಲ ಬಾರಿಗೆ 26,945 ವಿದ್ಯಾರ್ಥಿನಿಯರು, 14,823 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಇದರಲ್ಲಿ 84 ವಿದ್ಯಾರ್ಥಿಗಳಿಗೆ ರ್ಯಾಂಕ್​ ಪ್ರಮಾಣ ಪತ್ರ ಸ್ವೀಕರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು