News Karnataka Kannada
Monday, April 29 2024
ಸಾಂಡಲ್ ವುಡ್

ಚಿತ್ರೀಕರಣದ ವೇಳೆ ಫೈಟರ್ ಸಾವು ಪ್ರಕರಣ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ನಟ ಅಜಯ್ ರಾವ್

Films
Photo Credit :

ಬೆಂಗಳೂರು, ;‘ಲವ್ ಯೂ ರಚ್ಚು’ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿ ಫೈಟರ್ ವಿವೇಕ್ ಮೃತಪಟ್ಟ ಪ್ರಕರಣದಲ್ಲಿ ನಟ ಅಜಯ್ ರಾವ್ ಗೆ ಬಂಧನದ ಭೀತಿ ಎದುರಾಗಿದೆ. ಹೀಗಾಗಿ ಅಜಯ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ರಾಮನಗರ 3ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ಅಜಯ್ ರಾವ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಆಗಸ್ಟ್ 26ರಂದು ಅಜಯ್ ರಾವ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.ಪ್ರಕರಣ ಸಂಬಂಧ ದಾಖಲಾದ ಎಫ್‌ಐಆರ್‌ನಲ್ಲಿ ಅಜಯ್ ರಾವ್ ಹೆಸರನ್ನು ಇತರೆ ಆರೋಪಿಗಳು ಎಂದು ನಮೂದಿಸಲಾಗಿರುವುದರಿಂದ ನಿರೀಕ್ಷಣಾ ಜಾಮೀನಿಗೆ ಅಜಯ್ ರಾವ್ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ವಿಚಾರಣೆಗೆ ಹಾಜರ್ ಆಗುವಂತೆ ಅಜಯ್ ರಾವ್ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ, ಅಜಯ್ ರಾವ್ ವಿಚಾರಣೆಗೆ ಹಾಜರ್ ಆಗಿಲ್ಲ ಎನ್ನಲಾಗಿದೆ. ಇನ್ನು ನಟಿ ರಚಿತಾ ರಾಮ್ ವಿಚಾರಣೆ ಎದುರಿಸಿದ್ದಾರೆ. ನಿನ್ನೆ (ಆ.24) ಬಿಡದಿ ಪೊಲೀಸ್ ಠಾಣೆಗೆ ರಚಿತಾ ರಾಮ್ ಹಾಜರಾದರು. ವಿಚಾರಣೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ರಚಿತಾ ರಾಮ್, ಘಟನೆ ನಡೆದಾಗ ನಾನು ಅಲ್ಲಿರಲಿಲ್ಲ. ಉದ್ದೇಶ ಪೂರ್ವಕವಾಗಿ ಈ ಘಟನೆ ನಡೆದಿಲ್ಲ. ಈ ಘಟನೆಯಿಂದ ನನಗೂ ನೋವಾಗಿದೆ ಎಂದರು. ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಶಂಕರ್, ಸಾಹಸ ನಿರ್ದೇಶಕ ವಿನೋದ್, ಕ್ರೇನ್ ಚಾಲಕ ಮಹಾದೇವ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮೂವರಿಗೆ ಈ ಹಿಂದೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಲಾಗಿದೆ. ನಿರ್ಮಾಪಕ ಹಾಗೂ ಪ್ರೊಡಕ್ಷನ್ ಮ್ಯಾನೇಜರ್ ನಾಪತ್ತೆಯಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು