ಚಿತ್ರ ಪ್ರದರ್ಶಕರಿಂದ ಪುನೀತ್‌ಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಕೆ

ಬೆಂಗಳೂರು, ನ 6: ಕನ್ನಡ ನಟ ಪುನೀತ್ ರಾಜಕುಮಾರ್ ಅಕಾಲಿಕ ನಿಧನದಿಂದ ಇಡೀ ಭಾರತ ಚಿತ್ರರಂಗ ಕಂಬನಿ ಮಿಡಿದಿತ್ತು. ಚಿತ್ರರಂಗದ ವತಿಯಿಂದ ಪುನೀತ್​ ರಾಜ್‌ಕುಮಾರ್‌ಗೆ ನಮನ ಸಲ್ಲಿಸುವ ಹಲವು ಕಾರ್ಯಕ್ರಮಗಳೂ ನಡೆದಿವೆ. ಇದೇ ಮಾದರಿಯಲ್ಲಿ ಸ್ಯಾಂಡಲ್‌ವುಡ್ ಅಪ್ಪುಗೆ ಶ್ರದ್ಧಾಂಜಲಿ ಸಲ್ಲಿಸಲು ಚಿತ್ರ ಪ್ರದರ್ಶಕರ ವಲಯ ಸಿದ್ಧತೆ ನಡೆಸಿದೆ.

ಈ ಬಗ್ಗೆ ಮಾತನಾಡಿರುವ ಪ್ರದರ್ಶಕರ ವಲಯದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್, ಪುನೀತ್‌ಗೆ ರಾಜ್ಯದ 550ಕ್ಕೂ ಅಧಿಕ ಚಿತ್ರಮಂದಿರಗಳು ನಮನ ಸಲ್ಲಿಸಲಿವೆ. ನಾಳೆ (ನವೆಂಬರ್ 7) ಸಂಜೆ 6ಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರಿಂದ ಪುನೀತ್​ಗೆ ನಮನ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.

ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ನಟ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಚಿತ್ರಮಂದಿರಗಳಲ್ಲಿ ಮೊಂಬತ್ತಿ ಹಚ್ಚಿ ಪುನೀತ್‌ಗೆ ದೀಪಾಂಜಲಿ ನಡೆಸಲಾಗುವುದು. ನಂತರ ಮೌನಾಚರಣೆ ಮೂಲಕ ಪುನೀತ್ ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಾಗುವುದು. ಈ ಮೂಲಕ ಥಿಯೇಟರ್ ಸಿಬ್ಬಂದಿ, ಅಭಿಮಾನಿಗಳು ನೆಚ್ಚಿನ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನವೆಂಬರ್ 16ರಂದು ಪುನೀತ ನಮನ ಕಾರ್ಯಕ್ರಮ

ಇದೇ ನವೆಂಬರ್ 16ರಂದು ನಡೆಯುವ ‘ಪುನೀತ ನಮನ’ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಲಾಗುತ್ತಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಡಾ. ರಾಜಕುಮಾರ್ ಕುಟುಂಬದ ಜತೆ ಚರ್ಚೆ ಮಾಡಿ ಕಾರ್ಯಕ್ರಮ ಮಾಡಲಾಗುತ್ತಿದ್ದು, ಚಿತ್ರೋದ್ಯಮದ ಗಣ್ಯರು, ಕಲಾವಿದರು ಭಾಗಿಯಾಗಲಿದ್ದಾರೆ ಎಂದರು.

ನ.16ರ ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ವಿ.ನಾಗೇಂದ್ರ ಪ್ರಸಾದ್‌ರಿಂದ 5 ನಿಮಿಷದ ಹಾಡು ತಯಾರಾಗಲಿದ್ದು, ಪುನೀತ್ ನಡೆದು ಬಂದ ಹಾದಿಯ ಚಿತ್ರಣ ಇರುತ್ತದೆ. 2000 ಜನರು ಕ್ಯಾಂಡಲ್ ಹಚ್ಚಿ ಶ್ರದ್ಧಾಂಜಲಿ ಕೋರಲು ಯೋಜಿಸಲಾಗಿದೆ ಎಂದು ಜಯರಾಜ್ ಹೇಳಿದ್ದಾರೆ.

ಪುನೀತ ನಮನ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತ ಚಿತ್ರರಂಗದ ಖ್ಯಾತನಾಮರು ಭಾಗಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ”ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟ- ನಟಿಯರು ಆಗಮಿಸಲಿದ್ದಾರೆ. ಕಮಲ್ ಹಾಸನ್, ಧನುಷ್ ಸೇರಿ ಹಲವರಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿಸಿದರು. ಮಧ್ಯಾಹ್ನ 3 ಘಂಟೆಯಿಂದ ಕಾರ್ಯಕ್ರಮ ಆರಂಭ ಆಗಲಿದ್ದು, ಸ್ಯಾಕ್ಸೋಪೋನ್ ಮೂಲಕ ಕಾರ್ಯಕ್ರಮ ಆರಂಭ ಆಗುತ್ತದೆ ಎಂದು ಜಯರಾಜ್ ಮಾಹಿತಿ ನೀಡಿದ್ದಾರೆ.

 

 

Gayathri SG

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

6 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

13 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

25 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

35 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

56 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago