ಸಾಂಡಲ್ ವುಡ್ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಸೆ.10ರಂದು ಚೌತಿ ಹಬ್ಬದ ಅಂಗವಾಗಿ ತಮ್ಮ ಬಹುನಿರೀಕ್ಷಿತ ಸಿನಿಮಾ ಡಿ55 ಚಿತ್ರದ ಟೈಟಲ್ ಬಿಡುಗಡೆಯಾಗಲಿದೆ. ಈ ಬಗ್ಗೆ ನಟ ದರ್ಶನ್ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಗಣೇಶ ಹಬ್ಬಕ್ಕೆ ಡಿ 55 ಚಿತ್ರದ ಟೈಟಲ್ ಲಾಂಚ್ ಮಾಡಲು ಚಿತ್ರ ತಂಡ ನಿರ್ಧರಿಸಿದೆ.
ವಿ.ಹರಿಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಮೀಡಿಯಾ ಹೌಸ್ ಸ್ಟುಡಿಯೋದಡಿ ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣದ ಹೊರೆ ಹೊತ್ತಿದ್ದಾರೆ. ವಿ.ಹರಿಕೃಷ್ಣ ಅವರು ದರ್ಶನ್ ಅವರ 55ನೇ ಚಿತ್ರವನ್ನು ಪೂರ್ಣ ಪ್ರಮಾಣದಲ್ಲಿ ನಿರ್ದೇಶಿಸಲಿದ್ದಾರೆ. ಸದ್ಯ ಸೆ.10ರಂದು ಟೈಟಲ್ ಬಿಡುಗಡೆಯಾಗಲಿದ್ದು, ಮುಂದಿನ ದಿನಗಳಲ್ಲಿ ಚಿತ್ರೀಕರಣ ಸೇರಿದಂತೆ ಬೇರೆ ಎಲ್ಲಾ ಅಂಶಗಳನ್ನು ಕೈಗೊಳ್ಳಲಾಗುತ್ತದೆ