ಮಂಗಳೂರು: ಸ್ಯಾಂಡಲ್ ವುಡ್ ನಟಿ, ಆ್ಯಂಕರ್ ಅನುಶ್ರೀ ಅವರ ಕೊರಳಿಗೆ ಸರಿಯಾಗಿ ಒಂದು ವರ್ಷದ ಬಳಿಕ ಮತ್ತೆ ಡ್ರಗ್ಸ್ ನಶೆಯ ಆರೋಪ ಸುತ್ತಿಕೊಂಡಿದೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿ ಕಿಶೋರ್ ಶೆಟ್ಟಿ ಮತ್ತಷ್ಟು ಸಂಗತಿಗಳನ್ನು ಬಾಯ್ಬಿಟ್ಟಿದ್ದಾನೆ.
ಕಿಶೋರ್ ಶೆಟ್ಟಿ ನೀಡಿದ ಮಾಹಿತಿಗಳ ಆಧಾರದ ಮೇಲೆ ಮೈಸೂರು ಪೊಲೀಸರು ಚಾರ್ಜ್ ಶೀಟ್ ತಯಾರಿಸಿದ್ದು ಅದರಲ್ಲಿ ಆ್ಯಂಕರ್ ಅನುಶ್ರೀ ಹೆಸರು ದಾಖಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ