ತೋತಾಪುರಿ ತೆರೆಗೆ ಬರಲು ಸಿದ್ದ ಎಂದ ಜಗ್ಗೇಶ್‌

ಬೆಂಗಳೂರು: ನವರಸ ನಾಯಕ ಜಗ್ಗೇಶ್‌ ಅವರ ಬಹುನಿರೀಕ್ಷಿತ ಸಿನಿಮಾ ತೋತಾಪುರಿ ತೆರೆಮೇಲೆ ಬರಲು ಸಿದ್ಧವಾಗಿದೆ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಲಾಕ್‍ಡೌನ್ ತೆರವುಗೊಂಡ ನಂತರ ಅಂದರೆ ಈಗ ಈ ಸಿನಿಮಾದ ಡಬ್ಬಿಂಗ್ ಮತ್ತೆ ಆರಂಭವಾಗಿದೆ. ತೋತಾಪುರಿ ಸಿನಿಮಾ ಅತಿಶೀಘ್ರದಲ್ಲಿ ನಿಮ್ಮ ಮುಂದೆ ಬರಲು ಸಿದ್ಧತೆ ನಡೆದಿದೆ. ನೀರ್ ದೋಸೆ ನಿರ್ದೇಶಕ ವಿಜಯ್ ಜೊತೆ ಎರಡನೇ ಚಿತ್ರಪಯಣ ನಗುವಿನ ರಸದೌತಣ ಎಂದು ಜಗ್ಗೇಶ್ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಚಿತ್ರದ ಚಿತ್ರೀಕರಣದ ಕೆಲವು ಫೋಟೋಗಳನ್ನು ನೋಡುತ್ತಿದ್ದರೆ ತೋತಾಪುರಿ ಅಂತರ್ ಧರ್ಮೀಯ ಪ್ರೇಮ ಕತೆ ಇರಬಹುದಾ ಎಂಬ ಅನುಮಾನ ಮೂಡಿಸುತ್ತದೆ. ಯಾಕೆಂದರೆ, ನಾಯಕ ಜಗ್ಗೇಶ್ ಹಣೆಗೆ ಕುಂಕುಮ ಇಟ್ಟುಕೊಂಡಿದ್ದರೆ, ನಾಯಕಿ ಅದಿತಿ ಬುರ್ಖಾ ಧರಿಸಿ ಮುಸ್ಲಿಂ ಹುಡುಗಿಯಾಗಿ ಹಾಗೂ ಸುಮನ್ ರಂಗನಾಥ್ ಕ್ರೈಸ್ತ ಸಿಸ್ಟರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರ ತೆರೆಯ ಮೇಲೆ ಬಂದರೆ ಚಿತ್ರದ ಕಥಾಹಂದರವೇನು ಎಂಬುದನ್ನು ತಿಳಿಯ ಬಹುದಾಗಿದೆ.
ನೀರ್ ದೋಸೆ ಚಿತ್ರದ ಬಳಿಕ ನಿರ್ದೇಶಕ ವಿಜಯ ಪ್ರಸಾದ್ ತೋತಾಪುರಿ ಸಿನಿಮಾ ಮೂಲಕವಾಗಿ ಮತ್ತೊಮ್ಮೆ ನವರಸನಾಯಕನಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಧನಂಜಯ್, ಅಧಿತಿ ಪ್ರಭುದೇವ, ಸುಮನ್ ರಂಗನಾಥ್ ಸೇರಿದಂತೆ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾ ಇನ್ನೇನು ತೆರೆಗಪ್ಪಳಿಸಲಿದೆ. ಈ ಕುರಿತಾಗಿಯೇ ಸಿಹಿ ಸುದ್ದಿ ಕೊಟ್ಟಿದ್ದಾರೆ ನವರಸ ನಾಯಕ ಜಗ್ಗೇಶ್ ನೀಡಿದ್ದಾರೆ.
ವಿಶೇಷ ಅಂದರೆ ಡಾಲಿ ಧನಂಜಯ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ವಿಜಯ ಪ್ರಸಾದ್ ನಿರ್ದೇಶಿಸಿದ್ದ ಸಿದ್ಲಿಂಗು ಹಾಗೂ ನೀರ್ ದೋಸೆ ಚಿತ್ರಗಳನ್ನು ನೋಡಿ ಇಷ್ಟಪಟ್ಟಿದ್ದ ಧನಂಜಯ, ನವರಸ ನಾಯಕ ಜಗ್ಗೇಶ್ ಅವರ ಜತೆ ನಟಿಸುವ ಅವಕಾಶ ಸಿಕ್ಕಿದ್ದೇ ಸಂಭ್ರಮಿಸಿದ್ದರು.

Indresh KC

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

4 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

4 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

6 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

6 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

6 hours ago