ನಟಿ ಹಿತಾ ಚಂದ್ರಶೇಖರ್ ಗೆ ಕೊರೋನಾ ಸೋಂಕು ದೃಢ

ಕೊರೋನಾ ಮೂರನೇ ಅಲೆ ಏಳುತ್ತಿರುವ ಕಾರಣ ಕರ್ನಾಟಕದಲ್ಲಿ  ಮತ್ತು ವೀಕೆಂಡ್ ಲಾಕ್‌ಡೌನ್‌ ಜಾರಿಗೊಳ್ಳಿಸಿದ್ದಾರೆ. ಬಾಲಿವುಡ್‌ನಲ್ಲಿ ಬಹುತೇಕ ಸ್ಟಾರ್ ನಟ, ನಟಿಯರಿಗೆ ಕೊರೋನಾ ಬಂದಿತ್ತು. ಈಗ ಸ್ಯಾಂಡಲ್‌ವುಡ್‌ನಲ್ಲಿ ಒಬ್ಬೊಬ್ಬರಿಗೇ ಈ ವೈರಸ್ ಒಕ್ಕರಿಸುತ್ತಿದೆ. ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಹಾಕುವ ಮೂಲಕ ಸೋಂಕಿನ ಬಗ್ಗೆ ಅಭಿಮಾನಿಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಸುಮಾರು 6 ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಹಿತಾ ಚಂದ್ರಶೇಖರ್  ಅನೇಕ ಜಾಹೀರಾತುಗಳಲ್ಲಿ  ಕಾಣಿಸಿಕೊಂಡಿದ್ದಾರೆ. ಈಗ ಅವರಿಗೆ ಕೊರೋನಾ ಸೋಂಕು ತಗುಲಿದೆ. ‘ನನಗೆ ಕೊರೋನಾ ಪಾಸಿಟಿವ್, ಸಣ್ಣ ಪುಟ್ಟ ಲಕ್ಷಣಗಳು ಕಾಣಿಸಿಕೊಂಡಿವೆ. ವ್ಯಾಕ್ಸಿನ್ ತೆಗೆದುಕೊಂಡಿರುವುದಕ್ಕೆ ಸಹಾಯವಾಯಿತು, ವ್ಯಾಕ್ಸಿನ್‌ಗೆ  ಧನ್ಯವಾದಗಳು. ನಾನು ಮೂರು ದಿನಗಳಿಂದ ಐಸೋಲೇಟ್‌ ಆಗಿದ್ದೀನಿ. ಕೊರೋನಾ ಟೆಸ್ಟ್‌ ರಿಸಲ್ಟ್‌ ಬಂದು ಮೂರು ದಿನಗಳಾಗಿತ್ತು. ದೇವರ ದಯೆ ನಾನು ಹೆಚ್ಚಿನ ಜನರನ್ನು ಭೇಟಿ ಮಾಡಿಲ್ಲ, ನನ್ನಿಂದ ಬೇರೆ ಅವರಿಗೆ ತಗಲುವ ಹಾಗೆ ನಾನು ಮಾಡಿಲ್ಲ. ದಯವಿಟ್ಟು ಮಾಸ್ಕ್‌  ಧರಿಸಿ, ವ್ಯಾಕ್ಸಿನ್ ಹಾಕಿಸಿಕೊಳ್ಳಿ ಹಾಗೂ ಎಲ್ಲಾ ರೀತಿಯ ಕೋವಿಡ್ ರೂಲ್ಸ್ ಫಾಲೋ ಮಾಡಿ, ಮುನ್ನೆಚ್ಚರಿಕೆ ವಹಿಸಿ,’ ಎಂದು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಬರೆದುಕೊಂಡಿದ್ದರು.

ಮನೆಯಲ್ಲಿಯೇ ಐಸೋಲೇಟ್ ಆಗಿರುವ ಹಿತಾ ಸೋಷಿಯಲ್ ಮೀಡಿಯಾದಲ್ಲಿ  ಆಯಕ್ಟಿವ್ ಆಗಿದ್ದಾರೆ. ತಾವು ಏನೆಲ್ಲಾ ಮಾಡಿದ್ದಾರೆ, ಏನು ಮಾಡುತ್ತಿದ್ದಾರೆ ಹಾಗೇ ದಿನ ಸಾಗಿಸಲು ಏನು ಮಾಡಲಿದ್ದಾರೆ ಎಂಬುದನ್ನೂ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಹಾಲಿವುಡ್ ಜನಪ್ರಿಯ ಐಕಾನ್‌ಗಳಾದ ಕೆರ್ಡಾಶಿಯನ್ ಮತ್ತು ಜೆನ್ನರ್ಸ್‌  ಅವರ ವಿಡಿಯೋ ಮತ್ತು ಸಿನಿಮಾಗಳನ್ನು ನೋಡುತ್ತಿದ್ದಾರಂತೆ. ಹೀಗಾಗಿ ನಿಮ್ಮಿಂದ ನನ್ನ ಐಸೋಲೇಷನ್‌ ಬೆಟರ್ ಆಗಿದೆ ಎಂದಿದ್ದಾರೆ ಹಿತಾ.

 

Gayathri SG

Recent Posts

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

27 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

27 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

46 mins ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

51 mins ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

56 mins ago

ಎಸ್‌ಎಸ್‌ಎಲ್‌ಸಿ ಫೇಲ್; ಮಂಡ್ಯದ ಬಾಲಕ ನೇಣಿಗೆ ಶರಣು, ವಿಷ ಸೇವಿಸಿದ ವಿದ್ಯಾರ್ಥಿನಿ

ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…

1 hour ago