ನಟ ದುನಿಯಾ ವಿಜಿ ತಾಯಿ ನಿಧನ

ಬೆಂಗಳೂರು : ನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಗುರುವಾರ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾಗಿ ಕಳೆದ 23 ದಿನಗಳಿಂದ ಅವರು ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆಯಷ್ಟೆ ಅವರ ಆರೋಗ್ಯ ಸ್ಥಿತಿ ಗಂಭಿರವಾಗಿ ಅನ್ನೋ ಸುದ್ದಿ ಲಭ್ಯವಾಗಿತ್ತು. ನಿತ್ಯ ವೈದ್ಯರು ಮನೆಗೆ ಬಂದು ವಿಜಯ್​ ಅವರ ತಾಯಿಯ ಆರೋಗ್ಯ ವಿಚಾರಿಸಿ ಅಗತ್ಯ ಚಿಕಿತ್ಸೆ ನೀಡುತ್ತಿದ್ದರಂತೆ. ಚಿಕಿತ್ಸೆ ಕೊಡಿಸುತ್ತಿದ್ದರೂ ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿತ್ತು ಎಂದು ತಿಳಿದು ಬಂದಿದೆ. ಅಮ್ಮನ ಆರೋಗ್ಯದ ಬಗ್ಗೆ ಪ್ರತಿಕ್ರಿಯಸಿದ್ದ ದುನಿಯಾ ವಿಜಯ್​ ಅವರು, ತಾಯಿಗೆ ಬ್ರೇನ್ ಸ್ಟ್ರೋಕ್​ ಆಗಿದ್ದು, ಅವರ ಆರೋಗ್ಯ ಹದಗೆಟ್ಟಿದೆ. ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿಲ್ಲ ಎಂದು ಮಾಹಿತಿ ನೀಡಿದ್ದರು.
ಕೆಲ ದಿನಗಳ ಹಿಂದಷ್ಟೇ ದುನಿಯಾ ವಿಜಯ್ ಅವರ ತಂದೆ ಹಾಗೂ ತಾಯಿಗೆ ಕೊರೋನಾ ಸೋಂಕಾಗಿತ್ತು. ಆಗಲೂ ಸಹ ಅವರಿಗೆ ಮನೆಯಲ್ಲೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಕೊಡಿಸಲಾಗಿತ್ತು. ಇಬ್ಬರೂ ಸಹ ಕೋವಿಡ್​ನಿಂದ ಚೇತರಿಸಿಕೊಂಡಿದ್ದರು. ಈ ವಿಷಯವನ್ನು ದುನಿಯಾ ವಿಜಯ್ ಅವರು ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದರು. ಇದಾದ ನಂತರ ಇನ್ನೇನು ಎಲ್ಲ ಸರಿ ಹೋಯಿತು ಎನ್ನುವಾಗಲೇ ಅವರ ತಾಯಿಯ ಆರೋಗ್ಯ ಹದಗೆಟ್ಟಿತ್ತು. ಅಮ್ಮನಿಗೆ ಬ್ರೇನ್ ಸ್ಟ್ರೋಕ್​ ಆಗಿರುವ ಕಾರಣದಿಂದ ಸ್ಥಿತಿ ಗಂಭಿರವಾಗಿತ್ತು. ಈಗ ತಾಯಿ ಕೊನೆಯುಸಿರೆಳೆದಿರುವ ಬಗ್ಗೆ ಫೇಸ್​ಬುಕ್​ನಲ್ಲಿ ವಿಜಯ್​ ಒಂದು ಫೋಟೋ ಹಂಚಿಕೊಳ್ಳುವ ಮೂಲಕ ಮಾಹಿತಿ ನೀಡಿದ್ದಾರೆ. ಅಮ್ಮ ಮತ್ತೆ ಹುಟ್ಟಿ ಬಾ ಎಂದು ಭಾವುಕರಾಗಿ ಪೋಸ್ಟ್​ ಮಾಡಿದ್ದಾರೆ.
ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಅವರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಆನೇಕಲ್​ನ ಕುಂಬಾರ ಹಳ್ಳಿಯಲ್ಲಿ ಮಾಡಲಾಗುತ್ತೆ. ಅಮ್ಮ-ಅಮ್ಮ ಕೊರೋನಾ ಸೋಂಕಿನಿಂದ ಗುಣಮುಖರಾದ ನಂತರ ವಿವರವಾಗಿ ಆ ಬಗ್ಗೆ ಬರೆದುಕೊಂಡಿದ್ದ ದುನಿಯಾ ವಿಜಯ್​ಅಪ್ಪ-ಅಮ್ಮನಿಗೆ ಕೊರೋನಾ ಸೋಂಕಾದಾಗ ಮನೆಯಲ್ಲಿ ಚಿಕಿತ್ಸೆ ಕೊಡಿಸುತ್ತಲೇ ಆಸ್ಪತ್ರೆಗಳಲ್ಲಿ ಬೆಡ್​ಗಾಗಿ ಹುಡುಕಾಟ ಮುಂದರೆಸಿದ್ದರಂತೆ. ಮನೆಯಲ್ಲಿದ್ದ ಉಳಿದವರು ಸಹ ಆಗಾಗ ಸ್ಯಾನಿಟೈಸ್ ಮಾಡಿಕೊಂಡು ಚಿಕಿತ್ಸೆ ಪಡೆಯುತ್ತಿರುವವ ಕೋಣೆಗೆ ಹೋಗಿ ಬಂದ ಕೂಡಲೇ ಸ್ನಾನ ಮಾಡುವುದು ಹಾಗೂ ಅವರ ಕೋಣೆಗೆ ಹೋಗುವಾಗ ಮಾಸ್ಕ್​ ಹಾಗೂ ಗ್ಲೌಸ್ ಧರಿಸುವ ಮೂಲಕ ಕೋವಿಡ್​ ನಿಯಮಗಳನ್ನು ಪಾಲಿಸುತ್ತಿದ್ದಂತೆ. ಇದರಿಂದಾಗಿ ಯಾರಿಗೂ ಯಾವುದೇ ಸಮಸ್ಯೆಯಾಗಲಿಲ್ಲ ಎಂದು ವಿಜಯ್ ಅವರು ಹೇಗಿಲ್ಲ ಮನೆಯಲ್ಲೇ ಅಪ್ಪ-ಅಮ್ಮನ ಚಿಕಿತ್ಸೆಗೆ ತಯಾರಿ ನಡೆಸಿದರು ಎಂದು ತಮ್ಮ ಫೇಸ್​ಬುಕ್​ನಲ್ಲಿ ವಿವರವಾಗಿ ಬರೆದುಕೊಂಡಿದ್ದರು.
ಮನೆಯಲ್ಲೇ ಚಿಕಿತ್ಸೆ ಕೊಡಿಸಲು ನಿರ್ಧರಿಸಿದ ಮರುದಿನ ಬೆಳಗ್ಗೆ 9:00ಕ್ಕೆ ಒಂದು ಆಟೋದಲ್ಲಿ ಆಕ್ಸಿಜನ್, ಮೆಡಿಸಿನ್ ಜತೆ ಈಶ್ವರ್ ಎಂಬ ಆರೋಗ್ಯ ಶುಶ್ರೂಷಕ ಬಂದು ಇಳಿದರು. ನಾನು ನನ್ನ ಮಗ ಮತ್ತು ಕೀರ್ತಿ ಮೂರು ಜನ ನಮ್ಮ ತಂದೆ ತಾಯಿಯನ್ನು ಕರೆದುಕೊಂಡು ಹೋಗಲು ಬಂದಿದ್ದ ಕ್ರೂರಿ ಕೊರೋನಾ ಜೊತೆ ಸೆಣೆಸಾಡಲು ನಿಂತೆವು. ಮಾನಸಿಕವಾಗಿ ನಾನು ನಂಬಿದ ಗುರುಗಳು ನನ್ನ ಜತೆಯಲ್ಲಿದ್ದರೆ, ದೈಹಿಕವಾಗಿ ನಮ್ಮ ಜೊತೆ ಆರೋಗ್ಯ ಶುಶ್ರೂಷಕ ಈಶ್ವರ್ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಅರ್ಧಗಂಟೆ ಬಂದು ಹೋಗುತ್ತಿದ್ದರು. ನಮ್ಮ ತಂದೆ ಈಗಾಗಲೇ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅದರಲ್ಲಿ ಈ ಕೊರೋನಾ ಅವರನ್ನು ತುಂಬಾ ಬಳಲುವಂತೆ ಮಾಡಿತು. ನಮ್ಮ ತಾಯಿ ಎರಡು ಮೂರು ದಿನದಲ್ಲಿ ಚಿಕಿತ್ಸೆಗೆ ಸ್ಪಂದಿಸಲು ಪ್ರಾರಂಭಿಸಿದರು. ಈ ನಡುವೆ ಪ್ರತಿ ದಿನ ವಿಡಿಯೋ ಕಾಲ್ ಮೂಲಕ ವೈದ್ಯರು ಚಿಕಿತ್ಸೆಯನ್ನು ಹೇಳುತ್ತಿದ್ದರು ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಅದರ ಜತೆಗೆ ಪ್ರತಿ ದಿನ ಬರುತ್ತಿದ್ದ ಈಶ್ವರ ನಮ್ಮಗಳ ಪಾಲಿಗೆ ನಿಜವಾದ ಈಶ್ವರನೆ ಆದ ಎಂದು ಸಹಾಯ ಮಾಡಿದ್ದನ್ನು ನೆನಪಿಸಿಕೊಂಡಿದ್ದರು.
ನಮ್ಮ ತಂದೆಯ ಆರೋಗ್ಯ ಮಾತ್ರ ದಿನದಿಂದ ದಿನಕ್ಕೆ ಬಿಗಡಾಯಿಸಲು ಪ್ರಾರಂಭಿಸಿತು. ಯಾವ ಮಟ್ಟಿಗೆ ಎಂದರೆ ನನ್ನ ಆತ್ಮೀಯರು ಫೋನ್ ಮಾಡಿದಾಗ ನಮ್ಮ ತಂದೆ ನಮ್ಮನ್ನು ಬಿಟ್ಟು ಹೋಗುತ್ತಾರೆ ಏನು ಎಂಬ ಅನುಮಾನ ಕಾಡುತ್ತಿದೆ ಎಂದು ಸ್ವತಃ ನಾನೇ ಹೇಳಿದ್ದುಂಟು. ಆ ಕಾರಣಕ್ಕೆ ಅವರ ಜತೆ ಕಳೆಯುತ್ತಿರುವ ಕೊನೆಯ ಕ್ಷಣಗಳು ನೆನಪಿನಲ್ಲಿ ಉಳಿಯಲಿ ಎಂಬ ಉದ್ದೇಶದಿಂದ ವಿಡಿಯೋ ಮಾಡಲು ಪ್ರಾರಂಭಿಸಿದೆವು. ಇದರ ಮಧ್ಯೆ ನಾನು ಭರವಸೆಯನ್ನು ಮಾತ್ರ ಕಳೆದುಕೊಂಡಿರಲಿಲ್ಲ. ಮೊದಲು ನನ್ನ ತಾಯಿ ಚೇತರಿಸಿಕೊಂಡು ಕೊರೋನಾದಿಂದ ಸಂಪೂರ್ಣವಾಗಿ ಗುಣಮುಖರಾದರು. ‘ ನೀನು ಹೆದರಬೇಡ. ಚೇತರಿಸಿಕೊಂಡ ನಂತರ ನನ್ನಮ್ಮ ನನ್ನನ್ನು ಕರೆದು ‘ ನಮಗೆ ಯಾರಿಗೂ ಸಿಗದ ಯೋಗ ನಿನಗೆ ಸಿಕ್ಕಿದೆ. ನಿನ್ನನ್ನು ಪ್ರೀತಿಸುವವರು ಇರುವವರೆಗೂ, ಅವರ ಆಶೀರ್ವಾದ, ಆರೈಕೆ ನಿನ್ನನ್ನು ಕಾಯುತ್ತದೆ’ ಎಂದು ಹೇಳಿದರು. ನಿಜವಾಗಲೂ ನಮ್ಮ ತಾಯಿ ಹೇಳಿದಂತೆ ಆಯಿತು. ನಿಮ್ಮಗಳ ಆಶೀರ್ವಾದ ಮತ್ತು ದೈವ ಬಲದಿಂದ ನಮ್ಮ ಮನೆಯಲ್ಲಿ ಚಮತ್ಕಾರ ನಡೆಯಿತು. ತಂದೆಯೂ ಗುಣಮುಖರಾದರು ಎಂದು ತಮ್ಮ ಅನುಭವವನ್ನು ವಿಜಯ್​ ಹಂಚಿಕೊಂಡಿದ್ದರು.

Indresh KC

Recent Posts

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

5 mins ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

33 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

59 mins ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

1 hour ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

1 hour ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

2 hours ago