ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಸಖತ್’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಲಾಗಿದೆ. ಇದೇ ತಿಂಗಳು ನವೆಂಬರ್ 26ರಂದು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ.
ನಿಶಾ ವೆಂಕಟ್ ಕೋನಂಕಿ ಹಾಗೂ ಸುಪ್ರೀತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು. ಸಿಂಪಲ್ ಸುನಿ ಆಕ್ಷನ್ ಕಟ್ ಹೇಳಿದ್ದಾರೆ.
ಈ ಚಿತ್ರದಲ್ಲಿ ಗಣೇಶ್ ಗೆ ಜೋಡಿಯಾಗಿ ನಿಶ್ವಿಕಾ ನಾಯ್ಡು ಅಭಿನಯಿಸಿದ್ದು ಕುರುಡನ ಪಾತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕಾಣಿಸಿಕೊಂಡಿದ್ದಾರೆ.
ಈಗಾಗಲೇ ಈ ಸಿನಿಮಾ ಟೀಸರ್ ಹಾಗೂ ಹಾಡು ಸಿನಿ ಪ್ರೇಕ್ಷಕರ ಗಮನ ಸೆಳೆದಿವೆ . ಜುಡಾ ಸ್ಯಾಂಡಿ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ