ಪವರ್ ಸ್ಟಾರ್ ನಮ್ಮನ್ನು ಅಗಲಿ 10 ದಿನ ಕಳೆದರೂ, ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ 10 ದಿನ ಕಳೆದರೂ, ಅಭಿಮಾನಿಗಳ ಅಭಿಮಾನ ಮಾತ್ರ ಕಿಂಚಿತ್ತೂ ಕಡಿಮೆಯಾಗಿಲ್ಲ. ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಸ್ಥಳಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಸೇರಿದಂತೆ ಪ್ರತಿದಿನ ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದ್ದು, ಗೌರವ ನಮನ ಸಲ್ಲಿಸುತ್ತಿದ್ದಾರೆ.

ಮಹಿಳೆಯರು, ಯುವಕ, ಯುವತಿಯರು, ವಿಶೇಷ ಚೇತನರು, ವೃದ್ಧರು, ಮಕ್ಕಳು ಸೇರಿದಂತೆ ಎಲ್ಲಾ ವಯೋಮಾನದವರು ಅಪ್ಪುವಿನ ಸಮಾಧಿ ಬಳಿಗೆ ಭೇಟಿ ನೀಡುತ್ತಿದ್ದು, ತಮ್ಮ ನೆಚ್ಚಿನ ನಾಯಕ ನಟನನ್ನು ನೆನೆದು ಕಣ್ಣೀರು ಹಾಕುತ್ತಿದ್ದಾರೆ. ಇಂದು ಗರ್ಭಿಣಿ ಮಹಿಳೆಯೊಬ್ಬರು ತನ್ನ ಒಂದು ತಿಂಗಳ ಮಗುವಿನೊಂದಿಗೆ ಅಪ್ಪು ಸಮಾಧಿ ಭೇಟಿ ಮಾಡಿದ್ದು ವಿಶೇಷವಾಗಿತ್ತು.

ಈ ಮಧ್ಯೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ವಿಕ್ರಮ್ ಕೂಡಾ ಇಂದು ಅಪ್ಪು ಸಮಾಧಿಗೆ ಭೇಟಿ ನೀಡಿ, ನಮನ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಚಿತ್ರವೊಂದಕ್ಕೆ ಅವರು ಹಾಡೊಂದನ್ನು ಹಾಡಬೇಕಿತ್ತು. ಆದರೆ, ಅದು ಆಗದಿದ್ದಕ್ಕೆ ತುಂಬಾ ನೋವಾಗುತ್ತಿದೆ ಎಂದರು.

ನಾಳೆ ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವಿದ್ದು, ಮಂಗಳವಾರ ಅರಮನೆ ಮೈದಾನದಲ್ಲಿ ಚಿತ್ರೋದ್ಯಮದ ಗಣ್ಯರು, ಅಪ್ಪು ಆಪ್ತ ಬಳಗಕ್ಕೆ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ನವೆಂಬರ್ 16 ರಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘದಿಂದ ಅಪ್ಪುಗೆ ಗೌರವ ನಮನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಇದರಲ್ಲಿ ಟಾಲಿವುಡ್, ಕಾಲಿವುಡ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

Sneha Gowda

Recent Posts

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

7 mins ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

31 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

42 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

53 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

1 hour ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

1 hour ago