ಮೈಸೂರು : ಮೈಸೂರು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ನೀಡಿದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಸ್ವೀಕರಿಸಿದರು.
ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ನಲ್ಲಿ ಮಂಗಳವಾರ ಘಟಿಕೋತ್ಸವ ಸಮಾರಂಭ ನಡೆಯುತ್ತಿದ್ದು, ಕಾರ್ಯಕ್ರಮಕ್ಕೆ ಡಾ.ರಾಜ್ಕುಮಾರ್ ಕುಟುಂಬಸ್ಥರು ಆಗಮಿಸಿದರು.
ನಟ ರಾಘವೇಂದ್ರ ರಾಜ್ಕುಮಾರ್ ಮತ್ತು ಪತ್ನಿ, ನಟ ವಿನಯ್ ರಾಜ್ಕುಮಾರ್, ಪುನೀತ್ರ ಅಕ್ಕ ಲಕ್ಷ್ಮೀ ಗೋವಿಂದು ಮತ್ತು ಮೊಮ್ಮಕ್ಕಳು ಉಪಸ್ಥಿತರಿದ್ದರು.
ಇತ್ತೀಚೆಗೆ ಅಶ್ವಿನಿ ಅವರನ್ನು ಭೇಟಿಯಾಗಿದ್ದ ಕುಲಪತಿ ಪ್ರೊ.ಹೇಮಂತ್ ಕುಮಾರ್ ನೇತೃತ್ವದ ನಿಯೋಗ, ಪುನೀತ್ ಅವರಿಗೆ ಗೌರವ ಡಾಕ್ಟರೇಟ್ ಕೊಡುವ ಬಗ್ಗೆ ಚರ್ಚಿಸಿತ್ತು. ಶತಮಾನೋತ್ಸವ ಪೂರೈಸಿರುವ ಮೈಸೂರು ವಿವಿಯು ಈ ಬಾರೀ ಅಪ್ಪು ಅವರಿಗೆ ಡಾಕ್ಟರೇಟ್ ಪದವಿ ಕೊಟ್ಟದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಪುನೀತ್(ಅಶ್ವಿನಿ) ಜತೆಗೆ ಶಹನಾಯಿ ವಾದಕ ಎಂ.ಮಹದೇವಸ್ವಾಮಿ, ವಿಜ್ಞಾನಿ ಅತ್ರಿ ಅವರಿಗೂ ರಾಜ್ಯಪಾಲರು ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.
ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ
ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…
ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ ಶಾಸಕರ ಅಚೀವ್ ಮೆಂಟ್…
ನಾನು ನಿಜವನ್ನೇ ಹೇಳುತ್ತಿದ್ದೇನೆ ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಅಲ್ಲ ಬದಲಾಗಿ ಅವರು ರಾಜರು ಎಂದು ರಾಹುಲ್ ಗಾಂಧಿ ಹೇಳಿದರು.
ಎಂಸಿ.ಸಿ. ಬ್ಯಾಂಕಿನ ನೂತನ ನವೀಕೃತ ಅತ್ಯಾಧುನಿಕ ಸುಸಜ್ಜಿತ ಆಡಳಿತ ಕಛೇರಿಯ ಉದ್ಘಾಟನೆ ಹಾಗೂ ಬ್ಯಾಂಕಿನ 112ನೇ ಸಂಸ್ಥಾಪಕರ ದಿನಾಚರಣೆಯ ಸಮಾರಂಭ…