ಮತ್ತೆ ಖಳನಾಯಕನಾಗಿ ಯೋಗಿ

ಬೆಂಗಳೂರು : ಡಾಲಿ ಧನಂಜಯ್ ನಾಯಕ  ಪಾತ್ರದಲ್ಲಿ ನಟಿಸುತ್ತಿರುವ  ಹೆಡ್ ಬುಷ್‌ ಚಿತ್ರದ  ನಿರ್ಮಾಪಕರು ಈ ಸಿನಿಮಾಗೆ ಆಸಕ್ತಿದಾಯಕ ತಾರಾಗಣವನ್ನು ಒಟ್ಟುಗೂಡಿಸುವ ಪ್ರಕ್ರಿಯೆಯಲ್ಲಿದ್ದಾರೆ.

ಪಾಯಲ್ ರಜಪೂತ್ ಕನ್ನಡದಲ್ಲಿ ಮೊತ್ತ ಮೊದಲ ಬಾರಿಗೆ ನಾಯಕಿಯಾಗಿ ನಟಿಸುತ್ತಿದ್ದು, ಸಿದ್ಲಿಂಗು-ಖ್ಯಾತಿಯ  ಯೋಗಿ ಹೆಡ್ ಬುಷ್ ಸಿನಿಮಾ ತಂಡಕ್ಕೆ ಸೇರಿಕೊಂಡಿದ್ದಾರೆ.

ಲಂಕೆ ಸಿನಿಮಾ ಸಾಂಗ್ ರಿಲೀಸ್ ಕಾರ್ಯಕ್ರಮದಲ್ಲಿ ಸ್ವತಃ ಯೋಗೇಶ್ ಅವರೆ ಈ ವಿಷಯವನ್ನು ದೃಢಪಡಿಸಿದ್ದಾರೆ. ದುನಿಯಾ ಸಿನಿಮಾದಲ್ಲಿ ವಿಲ್ಲನ್ ಪಾತ್ರದ ಮೂಲಕ ಬೆಳಕಿಗೆ ಬಂದರು. ಹೆಡ್ ಬುಷ್ ಸಿನಿಮಾದಲ್ಲಿ ಬೆಂಗಳೂರು ಭೂಗತ ಜಗತ್ತಿನ ಡಾನ್ ಎಂಪಿ ಜಯರಾಜ್ ಪಾತ್ರವನ್ನು ತೆರೆ ಮೇಲೆ ತರಲಾಗುತ್ತಿದೆ,  ಸಿನಿಮಾದಲ್ಲಿ ಯೋಗಿ ನಟಿಸುತ್ತಿರುವುದು ಮತ್ತಷ್ಟು ಕುತೂಹಲ ಹೆಚ್ಚಿಸಿದೆ.

ಹೆಡ್ ಬುಷ್ ಸಿನಿಮಾದಲ್ಲಿ ಯೋಗಿ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಹೆಚ್ಚಿನ ಮಾಹಿತಿಯನ್ನು ಸಿನಿಮಾ ತಂಡ ಬಹಿರಂಗ ಪಡಿಸಿಲ್ಲ, ಅಗ್ನಿ ಶ್ರೀಧರ್ ಬರೆದಿರುವ ಕಥೆಯ ಶೂಟಿಂಗ್ ನಡೆಯುತ್ತಿದ್ದು, ಶೀಘ್ರದಲ್ಲೇ ಯೋಗಿ ಸೆಟ್ ಗೆ ಬರಲಿದ್ದಾರೆ. ಇದು ಯೋಗಿಯವರ ಮೊದಲ ಪ್ಯಾನ್ ಇಂಡಿಯನ್ ಚಿತ್ರವಾಗಿದೆ.
Raksha Deshpande

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago