ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ ನಟಿ ಆಶಿಕಾ ರಂಗನಾಥ್ ಅಭಿನಯಿಸಿರುವ ಮದಗಜ ಸಿನಿಮಾದ ಟೈಟಲ್ ಟ್ರ್ಯಾಕ್ ಇಂದು ರಿಲೀಸ್ ಆಗಿದೆ.
ಇದು ಬಿಗ್ ಬಜೆಟ್ ಸಿನಿಮಾ ಆಗಿದ್ದು, ಇದಕ್ಕೆ ಉಪಪತಿ ಶ್ರೀನಿವಾಸ್ ಗೌಡ ಬಂಡವಾಳ ಹಾಕಿದ್ದಾರೆ. ಅಯೋಗ್ಯ ಖ್ಯಾತಿಯ ಮಹೇಶ್ ಈ ಚಿತ್ರದ ನಿರ್ದೇಶನ ಮಾಡಿದ್ದಾರೆ.
ಸದ್ಯ ಹಾಡುಗಳ ಮೂಲಕ ಮದಗಜ ಚಿತ್ರ ಭಾರೀ ಸದ್ದು ಮಾಡುತ್ತಿದ್ದು, ಈಗ ಟೈಟಲ್ ಟ್ರ್ಯಾಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಈ ಸಿನಿಮಾಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಚಿತ್ರದ ಟೈಟಲ್ ಟ್ರ್ಯಾಕ್ ಅನ್ನು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ.
ಈ ಹಾಡಿಗೆ ಸಂತೋಷ್ ವೆಂಕಿ ಧ್ವನಿಯಾಗಿದ್ದು, ನವೀನ್ ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಡಿ.3ಕ್ಕೆ ಮದಗಜ ಸಿನಿಮಾ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.