ಮೊದಲ ಬಾರಿಗೆ ದ್ವಿಪಾತ್ರದಲ್ಲಿ ಜಾಕಿ ಖ್ಯಾತಿಯ ನಟಿ ಭಾವನಾ!

ಭಾವನಾ ಮತ್ತೆ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ಭಜರಂಗಿ 2 ಸಿನಿಮಾದ ನಂತರ ಅವರಿಗೆ ಮತ್ತಷ್ಟು ಅವಕಾಶಗಳು ಬರುತ್ತಿದ್ದು, ಇದೀಗ ಮೊದಲ ಬಾರಿಗೆ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಪಿಂಕ್ ನೋಟ್ ಎಂದು ಹೆಸರು ಇಡಲಾಗಿದೆ.

ದುಡ್ಡಿನ ಹಿಂದೆ ಬಿದ್ದಾಗ ಮನುಷ್ಯ ಏನೆಲ್ಲ ಆಗುತ್ತಾನೆ ಎನ್ನುವ ಕುರಿತಾದ ಕಥಾ ಹಂದರ ಈ ಸಿನಿಮಾದಲ್ಲಿದ್ದು, ಮಂಗಳೂರಿನಲ್ಲಿ ನಡೆದ ನೈಜ ಘಟನೆಯನ್ನು ಈ ಸಿನಿಮಾಗಾಗಿ ಬಳಸಿಕೊಂಡಿದ್ದಾರಂತೆ ನಿರ್ದೇಶಕರು.

ಮಧ್ಯಮ ವರ್ಗದ ಕುಟುಂಬದಲ್ಲಿ ನಡೆದ ಘಟನೆ ಇದಾಗಿದ್ದು, ಭಾವನಾ ಕೂಡ ಮಧ್ಯಮ ವರ್ಗದ ಅಕ್ಕ-ತಂಗಿಯ ಪಾತ್ರವನ್ನು ನಿರ್ವಹಿ ಸುತ್ತಿದ್ದಾರೆ. ದಿಗಂತ್ ಅಲಿಯಾಸ್ ರಕ್ಷಣ್ ಈ ಸಿನಿಮಾದ ನಿರ್ದೇಶಕರಾಗಿದ್ದು, ಅಮ್ಮ ಎಂಟರ್ ಟೇನ್ಮೆಂಟ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ತಯಾರಾಗಲಿದೆ. ಬುಧವಾರವಷ್ಟೇ ಈ ಚಿತ್ರಕ್ಕೆ ಬೆಂಗಳೂರಿನಲ್ಲಿ ಮುಹೂರ್ತವಾಗಿದ್ದು, ಮೊದಲ ದೃಶ್ಯಕ್ಕೆ ಶಿವಮೂರ್ತಿ ಮುರಘಾ ಶರಣರು ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ‘2010ರಂದು ಮಂಗಳೂರಿನಲ್ಲಿ ನಡೆದ ಘಟನೆಯನ್ನು ನಿರ್ದೇಶಕರು ಹೇಳಿದಾಗ ಥ್ರಿಲ್ ಆಯಿತು. ದ್ವಿಪಾತ್ರ ಮಾಡುವುದು ಸವಾಲಿನ ಕೆಲಸವಾದರೂ,

ಇಂತಹ ಪಾತ್ರದಲ್ಲಿ ನಟಿಸುವುದು ಥ್ರಿಲ್ ಅನಿಸುತ್ತದೆ’ ಎಂದಿದ್ದಾರೆ ಭಾವನಾ. ಪಾತ್ರದ ಹಿನ್ನೆಲೆ ಮತ್ತು ಕಥೆಯ ಗುಟ್ಟವನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಸದ್ಯ ನಾಯಕಿಯನ್ನು ಮಾತ್ರ ಆಯ್ಕೆ ಮಾಡಿದ್ದು, ನಾಯಕನ ಪಾತ್ರವನ್ನು ಮುಂದಿನ ದಿನಗಳಲ್ಲಿ ಬಹಿರಂಗ ಮಾಡು ವುದಾಗಿ ಚಿತ್ರತಂಡ ಘೋಷಿಸಿದೆ. ಶ್ರೀನಿವಾಸ್ ಪ್ರಭು, ಪದ್ಮಜರಾವ್ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿದ್ದಾರೆ. ಬಹುತೇಕ ಕಥೆಯು ಅರಬ್ ಪ್ರಾಂತ್ಯದಲ್ಲಿ ನಡೆಯುವುದರಿಂದ ದುಬೈನ ರಸಾಸೆಲ್ ಖೈಮ್ ದಲ್ಲಿ ಶೇಕಡಾ ಅರವತ್ತರಷ್ಟು ಶೂಟಿಂಗ್ ಮಾಡುತ್ತಾರಂತೆ ನಿರ್ದೇಶಕರು.

Gayathri SG

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನವದೆಹಲಿ: ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಅವರಿಗೆ ಸುಪ್ರೀಂ…

8 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

12 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

21 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

32 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

51 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago