News Karnataka Kannada
Monday, April 29 2024
ಸಾಂಡಲ್ ವುಡ್

ಯುಗಾದಿ ಹಬ್ಬಕ್ಕೆ ಗಣೇಶ್ ನಟನೆಯ ಹೊಸ ಚಿತ್ರದ ಟೈಟಲ್ ಬಿಡುಗಡೆ

Ganesh
Photo Credit :

ಯುಗಾದಿಯಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಹೊಸ ಚಿತ್ರದ ಟೈಟಲ್ ಬಿಡುಗಡೆಯಾಗಲಿದೆ. ಈ ಹಿಂದೆ ಹಲವು ಚಿತ್ರಗಳಲ್ಲಿ ಒಟ್ಟಿಗೆ ಕೆಲಸ ಮಾಡಿದ್ದ ಪ್ರೀತಂ ಗುಬ್ಬಿ ಮತ್ತು ಗಣೇಶ್ ಮತ್ತೆ ಒಂದಾಗುತ್ತಿದ್ದಾರೆ.

ಈ ಹಿಂದೆ ಗಣೇಶ್ ಗೆ ‘ಮಳೆಯಲಿ ಜೊತೆಯಲಿ’, ‘ದಿಲ್ ರಂಗೀಲಾ’ ಮತ್ತು ’99’ ಚಿತ್ರಗಳನ್ನು ನಿರ್ದೇಶಿಸಿದ್ದ ಪ್ರೀತಿಂ ಗುಬ್ಬಿ ಇದೀಗ ಹೊಸ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ. ಯುಗಾದಿಯ ದಿನದಂದು ( ಎಪ್ರಿಲ್ 2) ಬೆಳಗ್ಗೆ 8.45ಕ್ಕೆ ಹೊಸ ಚಿತ್ರದ ಟೈಟಲ್ ಬಿಡುಗಡೆಯಾಗಲಿದೆ ಎಂದು ಗಣೇಶ್ ಟ್ವೀಟ್ ಮಾಡಿದ್ದಾರೆ.

“ನವ ಸಂವತ್ಸರ ಯುಗಾದಿಯಂದು ಹೊಸ ಚಿತ್ರದ ಟೈಟಲ್ ಲಾಂಚ್. ನಾನು , ಪ್ರೀತಂ ಗುಬ್ಬಿ ಮುಂಗಾರು ಮಳೆಯಿಂದ ಸಿನಿ ಪಯಣದಲ್ಲಿ ಜೊತೆಯಾದವರು. ನಮ್ಮ ಜೋಡಿಯ ಮಳೆಯಲಿ ಜೊತೆಯಲಿ, ದಿಲ್ ರಂಗೀಲಾ, 99 ಚಿತ್ರಗಳನ್ನು ನೋಡಿ ಹರಸಿದ್ದೀರಿ. ಈಗ ಶ್ರೀವಾರಿ ಟೀಕೀಸ್ ನೊಂದಿಗೆ ಮತ್ತೊಂದು ಹೊಸ ಕನಸಿನ ಪಯಣದ ಪ್ರಾರಂಭ. ಹರೆಯದ ಹೃದಯಗಳೇ, ಹರಸಿ” ಎಂದು ಗಣೇಶ್ ಟ್ವೀಟ್ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು