ರಕ್ಷಿತ್ ಶೆಟ್ಟಿ ನಿರ್ಮಾಣದಲ್ಲಿ ಹೊಸ ಸಿನೆಮಾ ಆಬ್ರಕಡಾಬ್ರ

ಬೆಂಗಳೂರು : ನಟ ರಕ್ಷಿತ್ ಶೆಟ್ಟಿಯವರ ಪರಮ್ವಾಹ್ ಸ್ಟುಡಿಯೋ ಆಬ್ರಕಡಾಬ್ರ ಎನ್ನುವ ಹೊಸ ಚಿತ್ರ ನಿರ್ಮಿಸಲು ಸಿದ್ಧತೆ ನಡೆಸಿದೆ. ಈ ಚಿತ್ರವನ್ನು ಉದಯೋನ್ಮುಖ ಬರಹಗಾರ ಮತ್ತು ನಿರ್ದೇಶಕ ಶಿಶಿರ್ ರಾಜ್ ಮೋಹನ್ ಅವರು ನಿರ್ದೇಶಿಸಲಿದ್ದಾರೆ. ಈ ಹಿಂದೆ ಕಿರಿಕ್ ಪಾರ್ಟಿ, ಹಂಬಲ್ ಪೊಲಿಟಿಶಿಯನ್ ನೊಗ್ರಾಜ್ ಸಿನಿಮಾಗಳನ್ನು ಪರಮ್ವಾಹ್ ಸ್ಟುಡಿಯೊ ಹೊರತಂದಿತ್ತು.

ಸಿನಿಮಾದ ಪೋಸ್ಟರ್ ಅನ್ನು ಹಂಚಿಕೊಂಡ ರಕ್ಷಿತ್ ಶೆಟ್ಟಿ ತಮ್ಮ ಸಂಸ್ಥೆಯಿಂದ ಅನಂತ್ ನಾಗ್ ಅಭಿನಯದ ಆಬ್ರಕಡಾಬ್ರ ಚಿತ್ರ ನಿರ್ಮಿಸುತ್ತಿರುವುದಾಗಿ ಘೋಷಿಸಲು ಹೆಮ್ಮೆಯಾಗುತ್ತಿದೆ ಎಂದು ಬರೆದುಕೊಂಡಿದ್ದರು. ವರ್ಷಾ ಕೊಡ್ಗಿ ಅವರು ವಿನ್ಯಾಸ ಮಾಡಿರುವ ಸಿನಿಮಾ ಪೋಸ್ಟರ್ ಸಿನಿಮಾದ ಕಥಾಹಂದರದ ಕುರಿತು ಕುತೂಹಲ ಮೂಡಿಸಿದೆ.

ತಾರಗಣದಲ್ಲಿ ಸಿರಿ ರವಿಕುಮಾರ್, ಬಿ.ವಿ ಶೃಂಗ, ಅವಿನಾಶ್ ರೈ ಮತ್ತಿತರು ಇದ್ದಾರೆ. ನಿರ್ದೇಶಕ ಶಿಶಿರ್ ರಾಜಮೋಹನ್ ಅವರಿಗೆ ಇದು ಮೊದಲ ಸಿನಿಮಾ. ಈ ಹಿಂದೆ ಅವರು ಕಿರುಚಿತ್ರ ಹಾಗೂ ಜಾಹೀರಾತುಗಳನ್ನು ನಿರ್ಮಿಸಿದ್ದಾರೆ.

ಆಬ್ರಕಡಾಬ್ರ ಎಂದರೆ ಅದೊಂದು ಮ್ಯಾಜಿಕ್ ಮಂತ್ರವಲ್ಲ, ಜೀವನದುದ್ದಕ್ಕೂ ನಮಗಾಗುವ ಅರ್ಥೈಸುವಿಕೆ, ಅನಾವರಣ, ಅಸ್ತಿತ್ವದ ಹುಡುಕಾಟ, ಗುರಿ ಎಲ್ಲವೂ ಅದರಲ್ಲಿ ಅಡಗಿದೆ ಎನ್ನುತ್ತಾರೆ ಶಿಶಿರ್.

Raksha Deshpande

Recent Posts

ಮೈಸೂರು ಜಿಲ್ಲೆಯಲ್ಲಿ ಶೇ.75ರಷ್ಟು ಮಳೆ ಕೊರತೆ

ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…

7 hours ago

ಮುರುಘಾ ಶರಣರಂತೆ ಪ್ರಜ್ವಲ್‌ ರೇವಣ್ಣನನ್ನು ಬಂಧಿಸಿ: ಮಾರಸಂದ್ರ ಮುನಿಯಪ್ಪ

'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ…

7 hours ago

ಯುವತಿಯ ಮೇಲೆ ಅತ್ಯಾಚಾರವೆಸಗಿ ವೀಡಿಯೋ ಹರಿಬಿಟ್ಟ ನಾಲ್ವರು ಅಪ್ರಾಪ್ತರ ಬಂಧನ

ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ  ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…

8 hours ago

ಸ್ವತಂತ್ರರಾಗಿ ಬದುಕಲು ಸ್ವತಂತ್ರ ಅಭ್ಯರ್ಥಿಯನ್ನು ಬೆಂಬಲಿಸಿ: ಕೆ. ಬುಕ್ಕಾ ಮನವಿ

ಜಿಲ್ಲೆಯ ಜ‌ನ ಸ್ವತಂತ್ರರಾಗಿ ಬದುಕಬೇಕಾದರೆ‌ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…

8 hours ago

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ

ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

8 hours ago

ಪಾದಯಾತ್ರೆ ನಡೆಸಿ ಮತಯಾಚಿಸಿದ ಶಾಸಕ ಅಶೋಕ್ ಮನಗೂಳಿ

ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.

8 hours ago