ರಾಗಿಣಿ, ಸಂಜನಾಗೆ ಮತ್ತೆ ಸಂಕಷ್ಟ: ಡ್ರಗ್ಸ್‌ ಸೇವನೆ ಸಾಬೀತು

ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಅವರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ತಿರುವು ದೊರಕಿದೆ. ನಟಿಯರು ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ ಎಂಬ ಅಂಶ ಎಫ್‌ಎಸ್‌ಎಲ್ ವರದಿಯಿಂದ ತಿಳಿದುಬಂದಿದೆ.

ನಟಿಯರಾದ ಸಂಜನಾ, ರಾಗಿಣಿ ಡ್ರಗ್ಸ್​ ಸೇವಿಸಿರುವುದು ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ದೃಢಪಟ್ಟಿದ್ದು, 10 ತಿಂಗಳ ಬಳಿಕ ಈ ವರದಿ ಸಿಸಿಬಿ ಪೊಲೀಸ್ ಕೈ ಸೇರಿದೆ. ಹೈದರಾಬಾದ್ ಪ್ರಯೋಗಾಲಯದಿಂದ ಬಂದ ವರದಿಯಲ್ಲಿ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ಅವರ ಸಹಚರರಾದ ವಿರೇನ್ ಖನ್ನಾ, ರವಿಶಂಕರ್, ಲೂಮ್ ಪೆಪ್ಪರ್, ರಾಹುಲ್ ತೋನ್ಸೆ ಡ್ರಗ್ಸ್ ಸೇವಿಸಿರುವುದು ಪರೀಕ್ಷೆಯಲ್ಲಿ ದೃಡಪಟ್ಟಿದೆ ಎಂದು ತಿಳಿದುಬಂದಿದೆ.

ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ತಲೆ ಕೂದಲನ್ನು 2020ರ ಅಕ್ಟೋಬರ್​​ನಲ್ಲಿ ಹೈದರಾಬಾದ್​ನ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಈಗ ಸಿಸಿಬಿ ಪೊಲೀಸರ ಕೈಸೇರಿದೆ. ಸದರಿ ರಿಪೋರ್ಟ್​ನಲ್ಲಿ ಇಬ್ಬರೂ ನಟಿಯರು ಡ್ರಗ್ಸ್ ಸೇವಿಸಿದ್ದರು ಎನ್ನುವುದು ದೃಢಪಟ್ಟಿದ್ದು, ಜತೆಗೆ ವಿರೇನ್​ ಖನ್ನಾ ಕೂಡ ಡ್ರಗ್ಸ್​ ಸೇವಿಸಿರುವುದು ಖಚಿತವಾಗಿದೆ ಎನ್ನಲಾಗಿದೆ.

ಸಾಮಾನ್ಯವಾಗಿ ಡ್ರಗ್ಸ್ ಪ್ರಕರಣದಲ್ಲಿ ರಕ್ತ ಮತ್ತು ಮೂತ್ರವನ್ನು ಮಾತ್ರ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಆದರೆ ಅದರಲ್ಲಿ ಡ್ರಗ್ಸ್ ಸೇವಿಸಿ ಒಂದೆರಡು ದಿನದೊಳಗೆ ಪರೀಕ್ಷೆ ಮಾಡಿದರೆ ಮಾತ್ರ ಪಾಸಿಟಿವ್ ಬರುತ್ತದೆ. ಆದರೆ ಸಾಕಷ್ಟು ಪ್ರಕರಣಗಳಲ್ಲಿ ಆರೋಪಿಗಳ ತಡವಾಗಿ ಬಂಧನವಾಗುತ್ತದೆ. ಇಂತಹ ಪರಿಸ್ಥಿತಿಯತ್ತಿ ವರದಿ ನೆಗೆಟಿಲ್ ಬಂದು ಅವರು ತಪ್ಪಿಸಿಕೊಳ್ಳುತ್ತಾರೆ. ಆದ್ದರಿಂದ ಆರೋಪಿಗಳ ಕೂದಲನ್ನು ಕಳೆದ ವರ್ಷ ಪರೀಕ್ಷೆಗೆ ಕಳುಹಿಸಲಾಗಿತ್ತು. ಈಗ ಅದರಲ್ಲಿ ಪಾಸಿಟಿವ್ ಬಂದಿದೆ ಎಂದು ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ.

Sampriya YK

Recent Posts

ಭಯಾನಕ ದೃಶ್ಯ : ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಬೆಂಕಿ ತಗುಲಿ 10 ಮಂದಿಗೆ ಗಾಯ

  ಬೈಕ್ ಸ್ಫೋಟಗೊಂಡು ಸುಮಾರು ಹತ್ತು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಈ ಭಯಾನಕ ಘಟನೆ…

3 mins ago

ಗುಂಡ್ಲುಪೇಟೆ ಪೊಲೀಸರಿಂದ ಕಾರ್ಯಾಚರಣೆ : ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ

ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವೇಳೆ ಗುಂಡ್ಲುಪೇಟೆ ಪೊಲೀಸರು ದಾಳಿ 2 ಕೆ.ಜಿ‌ ಗಾಂಜಾ ಸಮೇತ ಇಬ್ಬರು ಆರೋಪಿಗಳನ್ನು…

23 mins ago

13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಬೆದರಿಕೆ : ಪೊಲೀಸ್‌ ಅಲರ್ಟ್‌

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಗೆ ಭಾನುವಾರ ಇ-ಮೇಲ್‌ ಮೂಲಕ ಬೆದರಿಕಯೊಂದು ಬಂದಿದ್ದು ಅದರಂತೆ ದೇಶಾದ್ಯಂತ 13 ವಿಮಾನ ನಿಲ್ದಾಣಗಳನ್ನು ಸ್ಫೋಟಿಸುವುದಾಗಿ…

31 mins ago

ಮೂರು ಕೊಲೆ ಕೇಸ್‌ : ಬೆಳ್ಳಂ ಬೆಳಗೆ ಆರೋಪಿ ಕಾಲಿಗೆ ಪೊಲೀಸ್‌ ಗುಂಡೇಟು

ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ ಕಾಲಿಗೆ…

56 mins ago

ಅಮೇರಿಕಾದಿಂದ ತಿರಸ್ಕೃತಗೊಂಡ ಎಂಡಿಎಚ್​ ಮಸಾಲ : ಕಾರಣ ಇಲ್ಲಿದೆ

ಅಮೇರಿಕಾದಲ್ಲಿ ಎಂಡಿಎಚ್​ ಸಾಂಬಾರ್ ಮಸಾಲ ಪದಾರ್ಥಗಳು ತಿರಸ್ಕೃತಗೊಂಡಿವೆ. ಈ ಮಸಾಲಗಳಲ್ಲಿ ಸಾಲ್ಮೋನೆಲ್ಲಾ ಬ್ಯಾಕ್ಟೀರಿಯಾ ಕಂಡುಬಂದಿದ್ದರಿಂದ ಅಮೆರಿಕದ ಆಹಾರ ಹಾಗೂ ಔಷಧ…

1 hour ago

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

2 hours ago