ನಟಿ ರಚಿತಾ ರಾಮ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರು

ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣ ವೇಳೆ ಸಂಭವಿಸಿದ್ದ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಚಿತಾ ರಾಮ್ ಇಂದು ಬಿಡದಿ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದರು. ರಾಮನಗರ ಡಿವೈಎಸ್ಪಿ ಮೋಹನ್ ಕುಮಾರ್ ಅರ್ಧ ಗಂಟೆ ಕಾಲ ವಿಚಾರಣೆ ನಡೆಸಿ ನಟಿಯಿಂದ ಹೇಳಿಕೆಯನ್ನು ದಾಖಲಿಸಿಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಚಿತಾ ರಾಮ್, ಘಟನೆ ನಡೆದಾಗ ನಾನು ಸ್ಥಳದಲ್ಲಿ ಇರಲಿಲ್ಲ. ಈ ಬಗ್ಗೆ ಮಾಧ್ಯಮ, ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ತಿಳಿಯಿತು. ಈ ಕುರಿತು ಪೊಲೀಸರಿಗೆ ವಿವರಣೆ ನೀಡಿರುವುದಾಗಿ ತಿಳಿಸಿದರು.

ಘಟನೆ ಹೇಗಾಯಿತು ಎಂಬುದರ ಬಗ್ಗೆ ಗೊತ್ತಿಲ್ಲ. ಸಾಹಸ ದೃಶ್ಯಗಳಲ್ಲಿ ನಟಿಯರಿಗೆ ಹೆಚ್ಚು ಕೆಲಸ ಇರುವುದಿಲ್ಲ. ಹೀಗಾಗಿ ಅಲ್ಲಿನ ಸುರಕ್ಷತಾ ಕ್ರಮಗಳ ಬಗ್ಗೆ ನನ್ನಗೆ ಯಾವುದೇ ಮಾಹಿತಿ ಇಲ್ಲ ಎಂದು ಅವರು ಹೇಳಿದರು.

ಈ ಮಧ್ಯೆ ಪ್ರಕರಣದಲ್ಲಿ ನಿರ್ದೇಶಕ ಶಂಕರಯ್ಯ, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಮತ್ತು ಕ್ರೇನ್ ಚಾಲಕ ಮಹದೇವ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

15 mins ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

29 mins ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

42 mins ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

58 mins ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

1 hour ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

1 hour ago