ವರನಟನಿಗೆ ಗೂಗಲ್‌ ಅವಮಾನ ; ರಿಪೋರ್ಟ್‌ ಮಾಡಿದ ರಿಷಬ್‌ ಶೆಟ್ಟಿ

ಬೆಂಗಳೂರು: ಗೂಗಲ್ ಸರ್ಚನಲ್ಲಿ ತಮಿಳು ವೇದ್ ಸಿನಿಮಾ ತಂಡದ ಕುರಿತಾಗಿ ಸರ್ಚ್ ಮಾಡಿದರೆ ಡಾ. ರಾಜ್‍ಕುಮಾರ್ ಅವರ ಹೆಸರಿಗೆ ಅವಮಾನ ಆಗುವ ಪದವಿದೆ ಎಂದು ರಿಷಬ್ ಟ್ವೀಟ್ ಮಾಡಿದ್ದಾರೆ.
ತಮಿಳು ವಿಕ್ರಮ್ ವೇದ್ ಸಿನಿಮಾ ತಂಡದ ಬಗ್ಗೆ ಸರ್ಚ್ ಮಾಡಿದಾಗ ರಾಜ್‍ಕುಮಾರ್ ಅವರ ಫೋಟೋ ಕಾಣಿಸುತ್ತದೆ ಜೊತೆಗೆ ಅರೆಬೆಂದ (HALF BOIL) ಪಾತ್ರವೊಂದರಲ್ಲಿ ನಟಿಸಿದ್ದಾರೆ ಎಂಬಂತೆ ಮಾಹಿತಿ ಇದೆ. ದಯಮಾಡಿ ಗೂಗಲ್‍ಗೆ ರಿಪೋರ್ಟ್ ಮಾಡಿ, ತಪ್ಪು ಸರಿ ಹೋಗಲಿ ಎಂದು ಬರೆದುಕೊಂಡು ಟ್ವೀಟ್ ಮಾಡಿದ್ದಾರೆ. ಎಲ್ಲರಲ್ಲೂ ಒಂದು ಮನವಿ, ವಿಕ್ರಂ ವೇದ ತಮಿಳು ಚಿತ್ರದ ಗೂಗಲ್ ಪುಟದಲ್ಲಿ ನಮ್ಮ ಡಾ. ರಾಜಕುಮಾರ್ ಅವರ ಫೋಟೋ ಬೇರೆ ಹೆಸರಿನಲ್ಲಿ (half boil) ಅಂತ ನಮೂದಿಸಲಾಗಿದೆ, ದಯಮಾಡಿ ಅದನ್ನು ಗೂಗಲ್ ಗೆ report ಮಾಡಿ, ತಪ್ಪು ಸರಿ ಹೋಗಲಿ… pic.twitter.com/ah8p7Ish8H
— Rishab Shetty (@shetty_rishab) June 21, 2021
ಇತ್ತೀಚೆಗಷ್ಟೆ ಗೂಗಲ್‍ನಲ್ಲಿ ‘Ugliest Language of India‘ ಎಂದು ಟೈಪ್ ಮಾಡಿದರೆ ಕನ್ನಡ ಎಂದು ತೋರಿಸುತ್ತಿತ್ತು. ನಂತರ ಗೂಗಲ್ ತನ್ನ ತಪ್ಪನ್ನು ಸರಿಪಡಿಸಿಕೊಂಡಿತ್ತು. ಜೊತೆಗೆ ಕನ್ನಡಿಗರ ಬಳಿ ಕ್ಷಮೆಯಾಗಿಸಿತ್ತು. ಇದೀಗ ಗೂಗಲ್‍ನಿಂದ ಮತ್ತೊಂದು ಎಡವಟ್ಟಾಗಿದೆ. ಕನ್ನಡದ ಮೇರು ನಟ ಡಾ. ರಾಜ್‍ಕುಮಾರ್ ಅವರ ಫೋಟೋ ತಮಿಳು ಸಿನಿಮಾದ ತಾರಾಗಣದ ಪಟ್ಟಿಯಲ್ಲಿ ಕಾಣಿಸುತ್ತಿದೆ. ತಮಿಳಿನ ಸಿನಿಮಾ ವಿಕ್ರಂ ವೇದ ಚಿತ್ರದ ತಾರಾಗಣದ ಪಟ್ಟಿಯಲ್ಲಿ ಡಾ. ರಾಜ್‍ಕುಮಾರ್ ಅವರ ಫೋಟೋ ಸಹ ಕಾಣಿಸಿಕೊಂಡಿದೆ. ಈ ಮೂಲಕ ಕನ್ನಡ ಹಾಗೂ ಡಾ, ರಾಜ್‍ಕುಮಾರ್ ಅವರಿಗೆ ಅವಮಾನ ಮಾಡಿದೆ ಎಂದು ಕನ್ನಡಿಗರು ಮತ್ತೆ ಸಿಟ್ಟಿಗೆದಿದ್ದಾರೆ. ಈಗಾಗಲೇ ಸಾಕಷ್ಟು ಮಂದಿ ಸಿನಿಮಾ ಕಲಾವಿಧರು, ಅಭಿಮಾನಿಗಳು ಈ ಬಗ್ಗೆ ಗೂಗಲ್ ರಿಪೋರ್ಟ್ ಮಾಡಿದ್ದಾರೆ.
ಗೂಗಲ್‍ನಲ್ಲಿ ಹೀಗೆ ತಪ್ಪಾಗಿ ಬೇರೆಯವರ ಫೋಟೋಗಳನ್ನು ಹಾಕುವುದು ಹೊಸದೇನಲ್ಲ. ಈ ಹಿಂದೆಯೂ ಗೂಗಲ್ ಕಡೆಯಿಂದ ಇಂತಹ ಎಡವಟ್ಟಾಗಿದೆ. ಯಾರದ್ದೋ ಹೆಸರಿಗೆ ಯಾರದ್ದೋ ಚಿತ್ರ ತೋರಿಸಿರುವ ಹಲವಾರು ಘಟನೆಗಳು ಸಾಕಷ್ಟು ಸಲ ಬೆಳಕಿಗೆ ಬಂದಿದೆ. ಬಳಕೆದಾರ ಹುಡುಕಿದಾಗ ಫಲಿತಾಂಶವನ್ನು ಗೂಗಲ್ ಸರ್ಚ್ ತೋರಿಸುತ್ತದೆಯೋ ಹೊರತು ಆ ಫಲಿತಾಂಶ ಸರಿ ಇದೆಯೋ ತಪ್ಪಿದೆಯೋ ಎಂಬುದನ್ನು ಪರಿಶೀಲಿಸುವುದಿಲ್ಲ. ಅಷ್ಟೇ ಅಲ್ಲದೇ ಇದು ಅಸಾಧ್ಯ. ಆದರೆ ಬಳಕೆದಾರರಿಗೆ ಆಯ್ಕೆಯನ್ನು ನೀಡಿದ್ದು ಒಂದು ವೇಳೆ ತಪ್ಪು ಮಾಹಿತಿಗಳು ಇದ್ದಲ್ಲಿ ಆ ಪೇಜ್ ಅನ್ನು ರಿಪೋರ್ಟ್ ಮಾಡಬಹುದಾಗಿದೆ. ರಿಪೋರ್ಟ್‍ಗಳ ಸಂಖ್ಯೆ ಜಾಸ್ತಿಯಾದರೆ ಗೂಗಲ್ ಸರ್ಚ್‍ನಲ್ಲಿ ಕೆಲಸ ಮಾಡುವವರು ಈ ವಿಚಾರವನ್ನು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಂಡು ಆ ಪೇಜ್‍ಗಳನ್ನು ಸರ್ಚ್‍ನಿಂದ ತೆಗೆದು ಹಾಕುತ್ತಾರೆ. ಗೂಗಲ್ ಸರ್ಚ್‍ನ ಕೊನೆಯಲ್ಲಿ ‘‘Send Feedback” ಆಯ್ಕೆಯನ್ನು ಕ್ಲಿಕ್ ಮಾಡಿ ರಿಪೋರ್ಟ್ ಮಾಡಬಹುದಾಗಿದೆ.

brijesh

Recent Posts

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

4 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

10 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

24 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

41 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

57 mins ago

ಬೋಯಿಂಗ್ ನ್ಯಾಷನಲ್ ಏರೋ ಮಾಡೆಲಿಂಗ್ ಸ್ಪರ್ಧೆ: ಎನ್ಎಂಎಎಂ ಇನ್ಸ್ಟಿಟ್ಯೂಟ್‌ಗೆ ಪ್ರಥಮ

ಭಾರತದ 855 ಸಂಸ್ಥೆಗಳ 2,350 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಕರ್ಷಿಸಿದ ಒಂಬತ್ತನೇ ವಾರ್ಷಿಕ ಬೋಯಿಂಗ್ ರಾಷ್ಟ್ರೀಯ ಏರೋ ಮಾಡೆಲಿಂಗ್ ಸ್ಪರ್ಧೆಯಲ್ಲಿ…

59 mins ago