ಬಾಲಿವುಡ್- ಸ್ಯಾಂಡಲ್ವುಡ್ ನಡುವಿನ ಹಿಂದಿ ಭಾಷೆ ವಿಚಾರವಾಗಿ ವಿವಾದ ಉದ್ಬವವಾಗಿದ್ದು, ಇದರ ಮದ್ಯೆ ನಟ ಯಶ್ ನಟಿಸಿರುವ ಕೆಜಿಎಫ್ ಚಾಪ್ಟರ್- 2 ಹಿಂದಿ ಚಿತ್ರರಂಗದಲ್ಲೇ ವಿನೂತನ ದಾಖಲೆ ನಿರ್ಮಿಸಿದೆ.
ಪ್ರಭಾಸ್ ಅಭಿನಯದ ಬಾಹುಬಲಿ 2 ಮತ್ತು ಅಮೀರ್ ಖಾನ್ ನಟನೆಯ ದಂಗಲ್ ಚಿತ್ರದ ಬಳಿಕ ಹಿಂದಿ ಅವತರಣಿಕೆಯಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿರುವ ಸಿನಿಮಾ ಆಗಿ ಹೊರಹೊಮ್ಮಿದೆ.
ಏಪ್ರಿಲ್ 14ರಂದು ರಿಲೀಸ್ ವಿಶ್ವದಾದ್ಯಂತ ಆಗಿರುವ ಈ ಸಿನಿಮಾ ಈಗಾಗಲೇ ಸಾವಿರ ಕೋಟಿಗೂ ಅಧಿಕ ಹಣ ಗಳಿಸಿದೆ. ಇದರಲ್ಲಿ ಹಿಂದಿ ಅವತರಣಿಕೆಯಲ್ಲೇ 343.13 ಕೋಟಿ ರೂಪಾಯಿ ಸಂಪಾದಿಸಿದೆ ಎಂದು ತಿಳಿದು ಬಂದಿದೆ.
ಪ್ರಭಾಸ್ ನಟನೆಯ ಬಾಹುಬಲಿ 2 ಹಿಂದಿಯಲ್ಲಿ 510.99 ಕೋಟಿ ರೂ. ಹಾಗೂ ಅಮೀರ್ ಖಾನ್ ನಟನೆಯ ದಂಗಲ್ 387.38 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಇದೀಗ ಕೆಜಿಎಫ್ ಚಾಪ್ಟರ್ 2 ಅನೇಕ ದಾಖಲೆಗಳನ್ನು ಬರೆಯುತ್ತಿದ್ದು, ಟೈಗರ್ ಜಿಂದಾ ಹೈ, ಪಿಕೆ ಹಾಗೂ ಸಂಜು ಚಿತ್ರ ನಿರ್ಮಿಸಿದ್ದ ದಾಖಲೆಗಳನ್ನು ಪುಡಿಗಟ್ಟಿದೆ.
ಇದಕ್ಕೆ ಸಂಬಂಧಿಸಿದಂತೆ ಸಿನಿಮಾ ವಿಶ್ಲೇಷಕ ತಾರಕ್ ಆದರ್ಶ್ ಎಂಬುವವರು ಟ್ವೀಟ್ ಸಹ ಮಾಡಿದ್ದು, ಹಿಂದಿಯಲ್ಲಿ ಅತಿ ಹೆಚ್ಚು ಹಣ ಗಳಿಕೆ ಮಾಡಿರುವ 3ನೇ ಚಿತ್ರವಾಗಿ ಕೆಜಿಎಫ್ 2 ಹೊರಹೊಮ್ಮಿದೆ ಎಂದು ತಿಳಿಸಿದ್ದಾರೆ. ಏಪ್ರಿಲ್ 14ರಂದು ಕನ್ನಡ, ಹಿಂದಿ, ಮಲಯಾಳಂ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಕೆಜಿಎಫ್ ಚಾಪ್ಟರ್ 2 ಚಿತ್ರ ರಿಲೀಸ್ ಆಗಿದ್ದು ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್ ಸೇರಿದಂತೆ ಅನೇಕರು ನಟನೆ ಮಾಡಿದ್ದಾರೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.