News Karnataka Kannada
Thursday, May 02 2024
ಸಾಂಡಲ್ ವುಡ್

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಗೌರವ: ಕಠಿಣ ಶಿಕ್ಷೆಗೆ ನಟ ದರ್ಶನ್ ಆಗ್ರಹ

Darshan Policeinvestigation 16072021
Photo Credit :

ಬೆಂಗಳೂರು : ಬೆಳಗಾವಿಯಲ್ಲಿ ಸ್ವಾತಂತ್ರ್ಯ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಗೌರವ ತೋರಿಸಿರುವುದನ್ನು ನಟ ದರ್ಶನ್ ಖಂಡಿಸಿದ್ದು, ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

ಆಕ್ರೋಶ ಭರಿತ ಟ್ವೀಟ್ ಮಾಡಿರುವ ದರ್ಶನ್ , ಸ್ವಾತಂತ್ರ್ಯ ದಿನಾಚರಣೆಯಂದು ಜನಿಸಿ, ಗಣರಾಜ್ಯೋತ್ಸವ ದಿನದಂದು ಮರಣ ಹೊಂದಿರುವ ಈ ಅಪ್ರತಿಮ ವೀರನಿಗೆ ಅಪಮಾನ ಮಾಡಿರುವುದು.

ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡತಕ್ಕದ್ದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಟ್ಯಾಗ್ ಮಾಡಿದ್ದಾರೆ. ನಾಗಣ್ಣ ನಿರ್ದೇಶನದ 2012ರಲ್ಲಿ ಬಿಡುಗಡೆಯಾದ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಕನ್ನಡದ ಐತಿಹಾಸಿಕ ಚಿತ್ರದಲ್ಲಿ ದರ್ಶನ್ ರಾಯಣ್ಣನ ಪಾತ್ರದಲ್ಲಿ ಮಿಂಚಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು